ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ (Call for applications).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಟಿ.ಎ.ಪಿ.ಸಿ.ಎಂ.ಎಸ್ ಆವರಣ, ಹೊಸಕೋಟೆ, ದೂರವಾಣಿ ಸಂಖ್ಯೆ 080-27931493 ಕ್ಕೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹೊಸಕೋಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.