Suspension of 18 MLAs: BJP surrenders to Speaker who called it dictatorship

18 ಶಾಸಕರ ಅಮಾನತು ಪ್ರಕರಣ: ಸರ್ವಾಧಿಕಾರಿ ಎಂದಿದ್ದ ಬಿಜೆಪಿ ಸ್ಪೀಕರ್‌ಗೆ ಶರಣು

ಬೆಂಗಳೂರು: ಸದನದಲ್ಲಿ ಅಗೌರವವಾಗಿ ವರ್ತಿಸಿದ್ದಾರೆ ಎಂಬ ಕಾರಣ ಬಿಜೆಪಿಯ (BJP) 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವ ಪ್ರಕರಣ ಕುರಿತು, ಸ್ಪೀಕರ್ ಅವರನ್ನು ಸರ್ವಾಧಿಕಾರಿ ಎಂದಿದ್ದ ಬಿಜೆಪಿ, ಕೊನೆಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮೂಲಕ ಸಭಾಪತಿ ಅವರಿಗೆ ಮನವಿ ಪತ್ರ ಬರೆಸುವ ಅಳಲು ತೋಡಿಕೊಂಡಿದೆ.

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದೇನೆ ಎಂದು ಆರ್. ಅಶೋಕ ತಿಳಿಸಿದ್ದಾರೆ.

ಪತ್ರದಲ್ಲಿ ಉಲ್ಲೇಖ ಮಾಡಿರುವಂತೆ, ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ.

ಈ ಸಂದರ್ಭದಲ್ಲಿ ತಾವು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.

ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ.

ಈ ದೇಗುಲಗಳಲ್ಲಿನ ಮಾನ್ಯ ಸಭಾಧ್ಯಕ್ಷರು ಮತ್ತು ಮಾನ್ಯ ಸಭಾಪತಿಗಳಿಗೆ ಇರುವ ಸ್ನಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.

ದಿ.21.03.2025ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ.

ಸಂಸದೀಯ ಚರ್ಚೆಯ ಗುಣಮಟ್ಟ, ಭಾಷೆಯ ಬಳಕೆ, ಕಲಾವಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವು ದಿನದಿಂದ ದಿನಕ, ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲೀ ಇದು ಅತ್ಯಂತ ಕಷ್ಟದ ಕಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರವಾದ ಗೌರವವಿದೆ.

ಒಂದು ವೇಳೆ ತಾವು ಅಂದು ನಮ್ಮ ಎಲ್ಲಾ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವುಗಳು ಖಂಡಿತ ಈ ಘಟನೆಯ ಬಗ್ಗೆ ಸೃಷೀಕರಣ ಕೊಡುತ್ತಿದ್ದೆವು. ಅದಕ್ಕೆ, ಅವಕಾಶ ಸಿಗಲಿಲ್ಲ ಈಗ ಒಂದಿಷ್ಟು ಕಠೋರ ಎನ್ನುವಂಥ ನಿರ್ಧಾರ ತಮ್ಮಿಂದ ಪ್ರಕಟವಾಗಿದೆ.

ಇದರಿಂದಾಗಿ ಒಟ್ಟು 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದಂತೆ ಆಗಿದೆ. ಈ ನಿರ್ಬಂಧಗಳನ್ನು ಸಡಿಲಿಸಿ ಎಂದಿನಂತೆ ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳಿಗೆ ಅವಕಾಶ ಕೊಡಬೇಕೆಂದು ಕೋರಿ ಈ ಪತ್ರವನ್ನು ಬರೆಯುತ್ತಿದ್ದೇನೆ.

ನಮ್ಮಗಳ ಪ್ರತಿಭಟನೆ ತಮ್ಮ ವಿರುದ್ಧ ಇರಲಿಲ್ಲ ಎಂಬುದನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಈ ಪತ್ರದ ಆರಂಭದಲ್ಲಿ ತಿಳಿಸಿದಂತೆ ಸದನ ದೊಡ್ಡದು, ಸಭಾಧ್ಯಕ್ಷರು ದೊಡ್ಡವರು ಎಂಬ ಪ್ರಜಾಪ್ರಭುತ್ವದ ಮೂಲಭೂತ ಆಶಯಕ್ಕೆ ಅನುಗುಣವಾಗಿ ಹಾಗೂ ನಾವೆಲ್ಲರೂ ಸೇರಿಕೊಂಡು ಈ ಸಂಸ್ಥೆಯ ಘನತೆ ಹಾಗೂ ಗೌರವವನ್ನು ಉಳಿಸಬೇಕಾಗಿದೆ ಎಂಬ ತತ್ವದಲ್ಲಿ ನಂಬಿಕೆ ಇರಿಸಿ ಅಮಾನತ್ತು ಮಾಡಿರುವ 18 ಶಾಸಕರ ಆದೇಶವನ್ನು ಮತ್ತೊಮ್ಮೆ ಮರುಪರಿಶೀಲಿಸಲು ಕೋರುತ್ತಾ ಸದರಿ ಆದೇಶವನ್ನು ಹಿಂಪಡೆಯಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದಿದ್ದಾರೆ.

ಅಲ್ಲದೆ ಜನಸಾಮಾನ್ಯರ ಹಿತದೃಷ್ಟಿಯಿಂದ ಸನ್ಮಾನ್ಯ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!