It is far from the truth that The Dara Bijasura government is sucking the blood of the people in the state: H.D. Kumaraswamy Kidi

ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರಕಾರ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಇಂದಿನಿಂದ ಜಾರಿಗೆ ಬರುತ್ತಿರುವ ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿಯಮಗಳ ಕುರಿತು ಒಂದೇ ಒಂದು ಪ್ರತಿಕ್ರಿಯೆ ನೀಡದೆ, ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ! ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಗುರುತರ ಆರೋಪ ಮಾಡಿರುವ ಅವರು, ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ ಎಂದು ದೂರಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದಿರುವ ಸಚಿವರು, ಸರಕಾರವನ್ನು ದರ ಬೀಜಾಸುರ ಸರಕಾರ ಎಂದು ಕರೆದಿದ್ದಾರೆ ಹಾಗೂ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್, ಕಾಂಗ್ರೆಸ್ ಕಂಪನಿ ಸರಕಾರ ಎಂದು ಮೂಡಿಸಿದ್ದಾರೆ.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!