Withdraw the suspension order of 18 MLAs, otherwise there will be a fierce struggle: R. Ashoka demands

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

ಬೆಂಗಳೂರು: ನಿನ್ನೆಯಷ್ಟೇ 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯುವಂತೆ ಪರಿಪರಿಯಾಗಿ ಮನವಿ ಮಾಡಿದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ (R.Ashoka) ಇಂದು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು.

ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ.

ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ.

ಸ್ಪೀಕರ್ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!