ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿರುವುದು ವರದಿಯಾಗಿದೆ.
ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳವು ನಡೆಸಿದ್ದಾನೆ ಎನ್ನಲಾಗಿದೆ. ಆದರೆ ಹೆಚ್ಚಿನ ಪ್ರಮಾಣದ ಮೊತ್ತ ಕಳುವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುಖ ಕಾಣದಂತೆ ಮೈತುಂಬಾ ಬಟ್ಟೆ ಹೊದ್ದಿರುವ ಕಳ್ಳ, ದೇವಾಲಯದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.