Sri Ramotsava from April 11th in Doddaballapura..

ದೊಡ್ಡಬಳ್ಳಾಪುರದಲ್ಲಿ ಏ.11ರಿಂದ ಶ್ರೀ ರಾಮೋತ್ಸವ.. ಬೃಹತ್ ಶೋಭಾಯಾತ್ರೆ

ದೊಡ್ಡಬಳ್ಳಾಪುರ (Doddaballapura): ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಏ.13ರಂದು ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ.

ಕಳೆದ 10 ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, 3 ವರ್ಷಗಳಿಂದ ಇದು ಬೃಹತ್ ಉತ್ಸವವಾಗಿ ನಡೆಯುತ್ತಿದೆ.

ಕಾರ್‍ಯಕ್ರಮದ ಅಂಗವಾಗಿ ವಾಹನ ಜಾಥಾ, ಹೋಮ ಹವನಾದಿಗಳು, ಕಲ್ಯಾಣೋತ್ಸವ, ವಿವಿಧ ದೇವರುಗಳ ಬೃಹತ್ ಶೋಭಾ ಯಾತ್ರೆ ನಡೆಯಲಿದ್ದು, ಈ ಬಾರಿ ಹೋಮದ ಪೂಜೆಯಲ್ಲಿ ಪೌರಕಾರ್ಮಿಕ ದಂಪತಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಕಾರ್‍ಯಕ್ರಮಗಳು

ಏ.11ರಂದು ಸಂಜೆ 4ಗಂಟೆಗೆ ನಗರದ ದರ್ಗಾಜೋಗಿಹಳ್ಳಿಯ ಕೆಂಪಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಸಂಜೆ 6.30 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ.

ಏ.12ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾಗಣಪತಿ ಹೋಮ, ರಾಮ ತಾರಕ ಹೋಮ, ದುರ್ಗಾ ಹೋಮಗಳಿವೆ. ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಸೀತಾರಾಮ ಕಲ್ಯಾಣೋತ್ಸವ ನಡೆಯಲಿದೆ.

ಏ.13 ರಂದು ಮಧ್ಯಾಹ್ನ 12.30ಕ್ಕೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ.

ನಂತರ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್‍ಯಕ್ರಮಗಳಿವೆ.

ಹಿಂದೂ ಸಮಾಜದ ಪ್ರತೀಕವಾಗಿ ಶಕ್ತಿ ತೋರಿಸುವ ಈ ಕಾರ್‍ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಗುಡುಗು ಮಿಂಚು ಸಹಿತ ಬಿಳುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ Harithalekhani

[ccc_my_favorite_select_button post_id="105609"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!