ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದರ ವಿರುದ್ಧ ರಾಜ್ಯ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ತಿರುಗೇಟು ಮಾಡಿದ್ದಾರೆ.
ಅಸಲಿಗೆ ಕಾಂಗ್ರೆಸ್ ವಿರುದ್ಧ ಅವರ ಹೋರಾಟವಲ್ಲ ಮೋದಿ ಸಾಹೇಬರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಲಾಡ್ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.
ನಿರಂತರವಾಗಿ ಬೆಲೆ ಏರಿಕೆ ಮಾಡುತ ದೇಶದ ಜನರನ್ನು ಕೇಂದ್ರ ಸರ್ಕಾರ ಲೂಟಿ ಹೊಡೆಯುತ್ತಿದೆ. ಆದ್ದರಿಂದ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ, ಮಾಡಲಿ ಬಿಡಿ ಎಂದು ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರ GST ಮೂಲಕ ಈ ದೇಶದ ಜನರ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು.
ನಾವು ಹಾಲಿನ ದರ ಏರಿಕೆ ಮಾಡಿದ್ದರಿಂದ ರೈತರಿಗೆ ಅನುಕೂಲವಾಗಿದೆ. ಒಳ್ಳೆಯ ಉದ್ದೇಶಕ್ಕೆ ದರ ಹೆಚ್ಚಿಸಿದ್ದೇವೆ. ರೈತರ ಪರವಾಗಿ ನಾವು ಕೆಲಸ ಮಾಡಿದರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಈ ಹೋರಾಟ ಮಾಡುತ್ತಿದ್ದಾರೆ. ಒಮ್ಮೆಯಾದರೂ ಬೆಲೆ ಏರಿಕೆ ಬಗ್ಗೆ ಇವರು ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆಯೇ ಎಂದು ಲಾಡ್ ಕಿಡಿಕಾರಿದರು.
ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಇದು ನಾಡಿನ ಜನತೆಗೂ ಗೊತ್ತಿದೆ. ಬೆಲೆ ಏರಿಕೆಗೆ ಮೋದಿ ಸಾಹೇಬರೆ ಕಾರಣ ಎಂದಿರುವ ಲಾಡ್, ಬಿಜೆಪಿ ಜನಾಕ್ರೋಶ ಯಾತ್ರೆ ಎಂಬುವುದು ಕೇವಲ ಪ್ರಚಾರಕ್ಕಾಗಿ. ಅವರ ಜನಾಕ್ರೋಶ ಯಾತ್ರೆಗೆ ರಾಜ್ಯದ ಜನರಿಂದ ಯಾವ ಬೆಂಬಲವೂ ಸಿಗಲ್ಲ ನೋಡಿ ಎಂದು.