ದೇವನಹಳ್ಳಿ: ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ (Accident) ಮಿನಿಬಸ್ ಚಾಲಕನ ಕಾಲು ತುಂಡಾಗಿರುವ ಘಟನೆ ದೇವನಹಳ್ಳಿ ಏರ್‌ಪೋರ್ಟ್ ರಸ್ತೆಯಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ದೇವನಹಳ್ಳಿ ಏರ್‌ಪೋರ್ಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಬಸ್ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದ್ದು, ಬಸ್‌ನಲ್ಲಿದ್ದ 7 ಪ್ರಯಾಣೀಕರಿಗೆ ಗಂಭೀರವಾದ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ಏರ್‌ಪೋರ್ಟ್ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರ ದಟ್ಟಣೆ ತಿಳಿಗೊಳಿಸಲು ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟರು.