ನೆಲಮಂಗಲ: ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ದಾಬಸ್ ಪೇಟೆಯ ಅಂಚೆಮನೆ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಗೋಪಾಲ್ (60 ವರ್ಷ), ದೀಪಿಕಾ (35 ವರ್ಷ), ಶಶಿಕಲಾ (55 ವರ್ಷ) ಹಾಗೂ ಕಾರು ಚಾಲಕ ಗೋಪಾಲ ಎಂದು ಗುರುತಿಸಲಾಗಿದೆ.
ಈ ದುರಂತದಲ್ಲಿ ಗಾಯಗೊಂಡ ಇನ್ನಿಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲರೂ ಮಲ್ಲೇಶ್ವರಂ ಮೂಲದವರೆಂದು ತಿಳಿದುಬಂದಿದ್ದು, ಬೆಂಗಳೂರಿನಿಂದ ತುಮಕೂರು ಕಡೆಗೆ ನಾಮಕರಣ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಅಂಚೆಮನೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಕಾರು ಜಖಂಗೊಂಡಿದೆ.