Cmsiddaramaiah praising to Krishna Byre Gowda

ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಹತ್ವದ ಘೋಷಣೆ ಮಾಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ.
ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಸಿದ್ದರಾಮಯ್ಯನವರು ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="105358"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!