Children who embrace chess learn discipline: DK Shivakumar

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಬೆಂಗಳೂರು: “ರಾಜಕೀಯ ಚದುರಂಗ ಆಟವಿದ್ದಂತೆ. ನಾವು ರಾಜಕಾರಣಿಗಳು ನಮ್ಮ ದಿನನಿತ್ಯ ಜೀವನದಲ್ಲಿ ನಮ್ಮ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ ಆವೃತ್ತಿಯ ನಮ್ಮ ಬೆಂಗಳೂರು ಇಂಟರ್ ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಒಪೆನ್ ಚೆಸ್ ಟೂರ್ನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ ಪ್ರತಿನಿತ್ಯ ನಮ್ಮ ದಾಳ ಉರುಳಿಸುತ್ತಿರಬೇಕು. ನಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಆಕ್ರಮಣ ಮಾಡುತ್ತಿರಬೇಕು” ಎಂದು ಹೇಳಿದರು.

“ಇಂತಹ ಅತ್ಯುತ್ತಮ ಕಾರ್ಯಕ್ರಮದ ಭಾಗವಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ಈ ಟೂರ್ನಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಚೆಸ್ ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ನೀವುಗಳು ಗ್ರಾಮೀಣ ಭಾಗದಲ್ಲೂ ಇಂತಹ ಟೂರ್ನಿ ಆಯೋಜಿಸಿ ಆ ಭಾಗದ ಮಕ್ಕಳಿಗೂ ಪ್ರೋತ್ಸಾಹ ನೀಡಬೇಕು. ನೀವು ನಮ್ಮ ಜಿಲ್ಲೆಯಲ್ಲೂ ಟೂರ್ನಿ ಆಯೋಜಿಸಿ” ಎಂದು ಸಲಹೆ ನೀಡಿದರು.

“ಮಕ್ಕಳು ಈ ಆಟವಾಡಲು ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚೆಸ್ ಆಟವನ್ನು ಮೈಗೂಡಿಸಿಕೊಂಡ ಮಕ್ಕಳು ಶಿಸ್ತು ಕಲಿಯುತ್ತಾರೆ. ಚೆಸ್ ಆಟದ ಮೂಲಕ ವಿಶ್ವನಾಥನ್ ಆನಂದ್ ಹಾಗೂ ಇತ್ತೀಚಿನ ದಿನಗಳಲ್ಲಿ ಗುಕೇಶ್ ಅವರು ದೇಶದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗುತ್ತಿದ್ದಾರೆ” ಎಂದರು.

“ಇಂತಹ ಯುವ ಕ್ರೀಡಾಪಟುಗಳ ಜತೆಗೆ ನಮ್ಮ ಸರ್ಕಾರ ಸದಾ ನಿಲ್ಲಲಿದೆ. ಇಂತಹ ದೊಡ್ಡ ಟೂರ್ನಿ ಆಯೋಜಿಸಿರುವ ಸಂಘಟಕರಿಗೆ ಅಭಿನಂದನೆಗಳು” ಎಂದು ತಿಳಿಸಿದರು.

ರಾಜಕೀಯ

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ DK Shivakumar

[ccc_my_favorite_select_button post_id="105376"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ದೊಡ್ಡಬಳ್ಳಾಪುರ: ಜಾತ್ರೆ ನೋಡಲು ಬಂದ ವೃದ್ಧೆಯ ಮಾಂಗಲ್ಯ ಸರ ಕಿತ್ತೊಯ್ದ ಕಳ್ಳರು..

ದೊಡ್ಡಬಳ್ಳಾಪುರ: ಜಾತ್ರೆ ನೋಡಲು ಬಂದ ವೃದ್ಧೆಯ ಮಾಂಗಲ್ಯ ಸರ ಕಿತ್ತೊಯ್ದ ಕಳ್ಳರು..

ಬ್ರಹ್ಮರಥೋತ್ಸವದ ಜನಜಂಗುಳಿಯಲ್ಲಿ ಕಳ್ಳರು 71 ವರ್ಷದ ವಯಸ್ಸಿನ ರಂಗಮ್ಮ ಅವರ ಕುತ್ತಿಗೆಯಲ್ಲಿದ್ದ ಸುಮಾರು 1.45 ಲಕ್ಷ ಮೌಲ್ಯದ ದೊಡ್ಡಬಳ್ಳಾಪುರ harithalekhani

[ccc_my_favorite_select_button post_id="105385"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!