ದೊಡ್ಡಬಳ್ಳಾಪುರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.
ಮುಖ್ಯಮಂತ್ರಿ ಸ್ಥಾನದ ಪವರ್ ಶೇರಿಂಗ್ ಕುರಿತು ಕೆಲ ಖಾಸಗಿ ಚಾನಲ್ ಗಳು, ವಿರೋಧ ಪಕ್ಷಗಳ ಚರ್ಚೆಗಳ ನಡುವೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪತ್ನಿಯೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
8 ಗಂಟೆ ಸುಮಾರಿಗೆ ಘಾಟಿ ಕ್ಷೇತ್ರಕ್ಕೆ ಬರುವ ಡಿಸಿಎಂ ಬಳಿಕ ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ದೇವಾಲಯಕ್ಕೂ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಮಧುರೆ ಭೇಟಿ ಇನ್ನೂ ಖಚಿತವಾಗಿಲ್ಲ.
ಡಿಸಿಎಂ ಜೊತೆ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ ಸೇರಿದಂತೆ ಸ್ಥಳೀಯ ಮುಖಂಡರು ಜೊತೆಯಾಗಲಿದ್ದಾರೆ.