ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಮಧುರೆ ಹೋಬಳಿ ಮಲ್ಲೋಹಳ್ಳಿಯಲ್ಲಿ ಇತಿಹಾಸ ಪ್ರಸಿದ್ದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ದೊಡ್ಡಬಳ್ಳಾಪುರ ತಾಲೂಕು ಹಾಗೂ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಗಳಿಂದ ರಥಕ್ಕೆ ಹಣ್ಣು ದವನ ಅರ್ಪಿಸಿ ಧನ್ಯತೆ ಮೆರೆದರು.
ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಕಲ್ಯಾಣೋತ್ಸವ, ವಿಶೇಷ ಪೂಜಾ ಕಾರ್‍ಯಕ್ರಮಗಳು ಜರುಗಿದವು.
ವಿವಿಧ ಮಂಡಲಿಗಳಿಂದ ಅರವಂಟಿಕೆ ಹಾಗೂ ಭಕ್ತಾದಿಗಳಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಬ್ರಹ್ಮರಥೋತ್ಸವದ ಅಂಗವಾಗಿ ಕಲ್ಯಾಣೋತ್ಸವ ನಡೆಯಿತು.
ಏ.14ರಂದು ಅಧ್ವವಾಹನೋತ್ಸವ ಹಾಗೂ ಏ.22ರ ವರೆಗೆ ನಿತ್ಯ ವಿವಿಧ ಧಾರ್ಮಿಕ ಉತ್ಸವ ಕಾರ್ಯಕ್ರಮಗಳು ನಡೆಯಲಿವೆ.