ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನ ಚಿಕ್ಕರಾಯಪ್ಪನಹಳ್ಳಿಯಲ್ಲಿ ಭಾನುವಾರ ಸ್ನೇಹಿತರ ಜೊತೆ ಬಾವಿಯಲ್ಲಿ ಈಜಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿ ತೇಜಸ್ (22 ವರ್ಷ) ಮೃತ ಯುವಕ.
ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು ದೊಡ್ಡಬಳ್ಳಾಪುರದಿಂದ ಆರು ಸ್ನೇಹಿತರು ತೆರಳಿದ್ದರು.
ದಿಢೀರನೆ ಮಳೆ ಬಂದಿದ್ದರಿಂದ ಐದು ಯುವಕರು ಬಾವಿಯಿಂದ ಮೇಲಕ್ಕೆ ಬಂದಿದ್ದಾರೆ.
ತೇಜಸ್ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.