Dr. BR Ambedkar Light of Knowledge of the World: D. Srikanth

Doddaballapura: ಡಾ.ಬಿ‌.ಆರ್.ಅಂಬೇಡ್ಕರ್ ಜಗತ್ತಿನ ಜ್ಞಾನದ ಬೆಳಕು: ಡಿ.ಶ್ರೀಕಾಂತ್

ದೊಡ್ಡಬಳ್ಳಾಪುರ (Doddaballapura): ಜಗತ್ತಿನ ಜ್ಞಾನದ ಬೆಳಕು ಸಂವಿಧಾನ ಶಿಲ್ಪಿ ಡಾ.ಬಿ‌.ಆರ್.ಅಂಬೇಡ್ಕರ್ ಆಗಿದ್ದಾರೆ. ಅವರಿಂದ ಭಾರತ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಸಾಧ್ಯವಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ನಡೆದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಸ್ವಾತಂತ್ರ್ಯ ಮತ್ತು ಸಮಾನತೆಯೊಂದಿಗೆ ಬದುಕಲು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿಕೊಟ್ಟ ಸಂವಿಧಾನ ಕಾರಣವಾಗಿದೆ. ಅಂಬೇಡ್ಕರ್ ಅವರ ಅವಿರತ  ಪರಿಶ್ರಮ ಮತ್ತು ಹೋರಾಟದ ಫಲವಾಗಿ ಸಾಮಾಜಿಕ ಸುಧಾರಣೆ ಸಾಧ್ಯವಾಯಿತು. 

ಅಂಬೇಡ್ಕರ್ ರವರು ನೀಡಿರುವ ವಿಚಾರಧಾರೆಗಳು ಇಂದಿಗೂ ಸಹ  ಪ್ರಸ್ತುತವಾಗಿವೆ. ಅವರ ವಿಚಾರಧಾರೆಗಳನ್ನು ಜಾರಿಗೊಳಿಸುವ ಮೂಲಕ ಭಾರತವನ್ನು ಮತ್ತಷ್ಟು ಸದೃಢವಾಗಿ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಣೆಗೆ ಶಿಕ್ಷಣ ಮಹತ್ಆಚರಿಸಬೇಕಾಗಿದೆ. ಜನಸಾಮಾನ್ಯರಿಗೆ ಶಿಕ್ಷಣ ನೀಡುವುದರಿಂದ ಮಾತ್ರ ಸಾಮಾಜಿಕ ವಿಮೋಚನೆ ಸಾಧ್ಯವೆಂದು ಪ್ರತಿಪಾದಿಸಿದರು. 

ಶಾಲೆಗಳು, ಕಾಲೇಜುಗಳು, ಹಾಸ್ಟೆಲ್‌ಗಳು ಹೆಚ್ಚು ಹೆಚ್ಚು ಪ್ರಾರಂಭಿಸುವ ಮೂಲಕ ಸರ್ವರಿಗೂ ಶಿಕ್ಷಣ ದೊರೆಯಬೇಕು. ಶಿಕ್ಷಣದ ಕುರಿತು ಅಂಬೇಡ್ಕರ್ ಅವರ ದೃಷ್ಟಿಕೋನ ಅನನ್ಯವಾದದ್ದು. ಶಿಕ್ಷಣದಿಂದ ದೇಶದ  ಪ್ರಗತಿಯ  ಸಾಧ್ಯವೆಂದು ಹೇಳುವ ಮೂಲಕ‌  ಶಿಕ್ಷಣದ ಮಹತ್ವವನ್ನು ಜಗತ್ತಿಗೆ ತಿಳಿಸಿದರು.

ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟರೆಡ್ಡಿ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ನಾವು ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕಾಗಿದೆ. ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ.

ಅಂಬೇಡ್ಕರ್ ಅವರ ವಿಶೇಷ ಬದ್ಧತೆ ಮತ್ತು ವಿದ್ವತ್ತುಗಳಿಂದಾಗಿಯೇ ಭಾರತ ಸಂವಿಧಾನವು ಶ್ರೇಷ್ಠ ಸಂವಿಧಾನ ಎಂದು ಹೆಸರು ಮಾಡಲು ಸಾಧ್ಯವಾಯಿತು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್,  ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು.

ಸಾಸಲು ಹೋಬಳಿ‌ ಕಸಾಪ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಕಸಾಪ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ಸಫೀರ್ ಅಹಮದ್, ನಾಗರತ್ನಮ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಶಿಕ್ಷಕರುಗಳಾದ  ಕೋದಂಡರಾಮ್, ನಾಗೇಶ್, ಗಣೇಶ್,  ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಮುನಿರತ್ನಮ್ಮ, ಮುನಿರಾಜು ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

[ccc_my_favorite_select_button post_id="105738"]
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

[ccc_my_favorite_select_button post_id="105742"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!