No-objection letter mandatory for drilling borewells: DC

ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ: DC

ಬೆಂ.ಗ್ರಾ.ಜಿಲ್ಲೆ (harithalekhani) : ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಪ್ರಸ್ತುತ ಬೇಸಿಗೆ ಹನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಇದರಿಂದ ಕುಡಿಯುವ ನೀರು, ಕೃಷಿ ಕಾರ್ಯ, ದಿನ ಬಳಕೆಯ ನೀರಿನ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಈಗಾಗಲೇ ಹೆಚ್ಚಿನ ಕೊಳವೆ ಬಾವಿ, ಕೆರೆ, ಜಲಾಶಯಗಳು ಬತ್ತಿ ಹೋಗಿದ್ದು ಉಳಿದ ನೀರಿನ ಸಂರಕ್ಷಣೆ ಆಗಬೇಕಿದೆ.

ಇದನ್ನೂ ಓದಿ: ಮಕ್ಕಳೊಂದಿಗೆ ಘಾಟಿ ಸುಬ್ರಹ್ಮಣ್ಯಕ್ಕೆ ಖ್ಯಾತ ನಟಿ ಮಾಲಾಶ್ರೀ

ಆದುದರಿಂದ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಬಿದ್ದಂತಹ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಡ್ಡಾಯವಾಗಿ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸಿ ಅಂತರ್ಜಲ ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು.

ಮತ್ತೆ ಮಳೆ ಆರಂಭವಾಗುವವರೆಗೂ ನೀರನ್ನು ಮಿತವಾಗಿ ಬಳಸಿ ಅಂತರ್ಜಲ ವ್ಯರ್ಥವಾಗಿ ಪೋಲ್ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಾರ್ವಜನಿಕರು ಬಳಕೆ ಮಾಡಬೇಕು.

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಮತ್ತು ಇತರೆ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಮತ್ತು ಕೊರೆದ ಕೊಳವೆಬಾವಿಗಳಿಂದ ಅಂತರ್ಜಲ ಬಳಸಲು ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು.

ಕೊಳವೆಬಾವಿ ಕೊರೆಯುವ ಮಾಲೀಕರು ಕಡ್ಡಾಯವಾಗಿ ತಾವು ಹೊಂದಿದ ರಿಗ್ ಯಂತ್ರಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿ ‘ನಮೂನೆ-7ಎ’ ಪಡೆದು ಕೊಳವೆಬಾವಿ ಕೊರೆಯಬೇಕು. ಕೊರೆದ ಕೊಳವೆಬಾವಿ ವಿಫಲವಾದರೆ ಸಂಬಂಧಪಟ್ಟ ಜಮೀನು ಮಾಲೀಕರು ಹಾಗೂ ರಿಗ್ ಮಾಲೀಕರು ವಿಫಲ ತೆರೆದ ಕೊಳವೆಬಾವಿಯನ್ನು ಸುರಕ್ಷಿತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು.

ಇದರಿಂದ ತೆರೆದ ವಿಫಲ ಕೊಳವೆಬಾವಿಗಳಿಗೆ ಚಿಕ್ಕ ಮಕ್ಕಳು ಬೀಳುವ ಸಂಭವ ಅಥವಾ ಇನ್ನಿತರ ಅವಘಡಗಳನ್ನು ತಪ್ಪಿಸಬಹುದು. ಇದನ್ನು ಎಲ್ಲರೂ ಗಂಭಿರವಾಗಿ ಪರಿಗಣಿಸತಕ್ಕದ್ದು.

ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಜಮೀನು ಮಾಲೀಕರು ಕಡ್ಡಾಯವಾಗಿ ಸ್ಥಳೀಯ ಗ್ರಾಮಪಂಚಾಯತ್/ಪಟ್ಟಣ ಪಂಚಾಯತ್/ನಗರಸಭೆ/ಪುರಸಭೆಗೆ ತಿಳಿಸಿ ನಿರಾಕ್ಷೇಪಣಾ ಪತ್ರ ಪಡೆದು ನಂತರ ಜಿಲ್ಲಾ ಅಂತರ್ಜಲ ಕಛೇರಿಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೊರೆಯಲು ನಿಯಮಾನುಸಾರ ಅನುಮತಿ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು ತಿಳಿಸಿದ್ದಾರೆ.

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಗುಜರಿ ಗೋಡಾನ್‌ನಲ್ಲಿ ಅಗ್ನಿ ಆಕಸ್ಮಿಕ..!

ದೊಡ್ಡಬಳ್ಳಾಪುರ: ಗುಜರಿ ಗೋಡಾನ್‌ನಲ್ಲಿ ಅಗ್ನಿ ಆಕಸ್ಮಿಕ..!

ಅಸ್ಲಂ ಪಾಷಾ ಎನ್ನುವವರಿಗೆ ಸೇರಿದ ಈ ಗುಜರಿ ಗೋಡಾನ್ಗೆ ಆಕಸ್ಮಿಕವಾಗಿ ತಗುಲಿರುವ ಬೆಂಕಿಯಿಂದಾಗಿ ಕಾಟನ್ ಬಾಕ್ಸ್ ಗೋಡನ್ ನಲ್ಲಿದ್ದ ವಸ್ತುಗಳು ಸಂಪೂರ್ಣ. Doddaballapura

[ccc_my_favorite_select_button post_id="105469"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!