ಬೆಂಗಳೂರು (Harithalekhani): ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು.
ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಆದಿಚುಂಚ ನಗಿರಿ ಮಠದ ಆವರಣದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ, ಪ್ರಸನ್ನ ಮಹಾಗಣಪತಿ ಮತ್ತು ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಮತ್ತು ಲೋಕಾರ್ಪಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ; ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್ ದಂಪತಿ| Video ನೋಡಿ
ದೇವರು ವರ ಹಾಗೂ ಶಾಪ ಎರಡನನ್ನೂ ನೀಡುವುದಿಲ್ಲ, ಕೇವಲ ಅವಕಾಶ ನೀಡುತ್ತಾನೆ. ಸಿಗುವ ಅವಕಾಶದಲ್ಲಿ ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. ನಮ್ಮ ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ.
ನಾವು ನಮ್ಮ ಮನೆ ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿ ಕೊಳ್ಳಬೇಕು. ನಮ್ಮ ಶಕ್ತಿಗೆ ಅನುಸಾರ ಮಠಗಳಿಗೆ ದಾನ ಮಾಡಬೇಕು. ಮನುಷ್ಯನ ಆಸೆಗೆ ಕೊನೆಯಿಲ್ಲ, ಆಸೆಗಳನ್ನು ಬದಿಗಿಟ್ಟು ಕೈಲಾದಷ್ಟು ದಾನ ಮಾಡಬೇಕು ಎಂದರು.
ಇದನ್ನೂ ಓದಿ: ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್
ಪರೋಪಕಾರಾರ್ಥಮ್ ಇದಂ ಶರೀರಮ್ ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ, ಹುಟ್ಟು ಸಾವಿನ ಮಧ್ಯೆ ಏನು ಸಾಧನೆ ಮಾಡು ತ್ತೇವೆ ಎಂಬುದು ಬಹಳ ಮುಖ್ಯ.
ಬದುಕಿನಲ್ಲಿ ಸಮಾಜಕ್ಕೆ ದಾನ ಧರ್ಮ ಮಾಡುವ ಕೆಲಸ ಮಾಡಬೇಕು. ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ ಎಂಬ ಶ್ಲೋಕವಿದೆ. ಅಂದರೆ ಮರ, ನದಿ, ಹಸು ಎಲ್ಲವೂ ಪರರ ಉಪಕಾರಕ್ಕಾಗಿ ಇವೆ. ಅದೇ ರೀತಿ ದೇಹ ಕೂಡ ಪರೋಪಕಾರಕ್ಕೆ ಸೀಮಿತವಾಗಬೇಕು ಎಂಬುದು ಈ ಶ್ಲೋಕದ ಅರ್ಥ.
ಶುದ್ದ ಮನಸ್ಸಿ ನಿಂದ ಮಠ, ದೇವಾಲಯ ಗಳಿಗೆ ಕೈಲಾದಷ್ಟು ದಾನ ಮಾಡಿದರೆ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.