ದೊಡ್ಡಬಳ್ಳಾಪುರ (Doddaballapura): ನಗರಸಭೆಯ 2025-26 ಸಾಲಿನ ಆಯ-ವ್ಯಯದ ಸಾರ್ವಜನಿಕ ಸಮಾಲೋಚನ ಸಭೆ ಜ.7 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
2025-26 ಸಾಲಿನ ಕರಡು ಆಯ-ವ್ಯಯದ ಕುರಿತಂತೆ ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೋಂದಾಯಿತ ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು, ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಾಗರಿಕರು, ಆಸಕ್ತ ಸಾರ್ವಜನಿಕರು ಭಾಗವಹಿಸಬಹುದಾಗಿದೆ.
ಬಜೆಟ್ ಕುರಿತಂತೆ ಚರ್ಚೆ ನಡೆಸಿ ಸಲಹೆ ಸೂಚನೆ ನೀಡಬಹುದು ಎಂದು ಪೌರಾಯುಕ್ತ ಕಾರ್ತಿಕ್ ಈಶ್ವರ್ ತಿಳಿಸಿದ್ದಾರೆ.