ದೊಡ್ಡಬಳ್ಳಾಪುರ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil kumaraswamy) ನಾಳೆ (ಜ.06) ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ.
ಇತ್ತೀಚೆಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡರಾದ ಹಾಡೋನಹಳ್ಳಿ ಅಪ್ಪಯ್ಯಣ್ಣ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡುತ್ತಿದ್ದಾರೆ.
ಸೋಮವಾರ ಮಧ್ಯಾಹ್ನ 2 ಗಂಟೆಗೆ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಅಪ್ಪಯ್ಯಣ್ಣ ಅವರ ಸ್ವಗೃಹಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.