ಬೆಂ.ಗ್ರಾ.ಜಿಲ್ಲೆ; ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ ಜಾರ್ಜ್ ಅವರು 2025 ರ ಜನವರಿ 09 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ (Power cut)
ಈ ಹಿನ್ನೆಲೆಯಲ್ಲಿ ನಾಳೆ ನಡೆಸಲು ಉದ್ದೇಶಿಸಿದ್ದ ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ ಉಪ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಜ.10ಕ್ಕೆ ಮುಂದೂಡಲಾಗಿದೆ ಎಂದು ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್ ತಿಳಿಸಿದ್ದಾರೆ.
ನಾಳೆ ಸಚಿವರು ಇಂಧನ ಇಲಾಖೆಯ ವಿಷಯಗಳ ಬಗ್ಗೆ ಚರ್ಚಿಸಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬೆಳಿಗ್ಗೆ 11.00 ಗಂಟೆಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್ ಡಿ.ಎಂ ಅವರು ತಿಳಿಸಿದ್ದಾರೆ.