ಬೆಂಗಳೂರು: ಖಾಸಗಿ ಸುದ್ದಿವಾಹಿನಿ ‘ಪಬ್ಲಿಕ್ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ (40 ವರ್ಷ) ಇಂದು ಸಂಜೆ ಅಕಾಲಿಕ ನಿಧನ ಹೊಂದಿದ್ದಾರೆ (Death news).
ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು. ಬಳಿಕ ಶಶಿಧರ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಶಶಿಧರ್ ಸಾವನ್ನಪ್ಪಿದ್ದಾರೆ.
ಸುಮಾರು 6 ವರ್ಷಗಳಿಂದ ಸುದ್ದಿವಾಹಿನಿ ‘ಪಬ್ಲಿಕ್ ಟಿವಿ’ಯ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರು.
ಶಶಿಧರ್ ಅವರು ಶಿವಮೊಗ್ಗದ ಸಕ್ರಿಯ ಪತ್ರಕರ್ತ ಎಂದೇ ಬಿಂಬಿತರಾಗಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ಕಡೂರಿಗೆ ಸನಿಹವಿರುವ ಕಲ್ಲಳ್ಳಿ ಗ್ರಾಮದವರು. ತಂದೆ ಹೊಸಂತಪ್ಪ ಹಾಗೂ ತಾಯಿ ಸಾವಿತ್ರಮ್ಮನ ಹಿರಿಯ ಪುತ್ರ
ಮೃತರು ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ. ಶಶಿಧರ್ ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.
ಕಿಡ್ನಿ ಸಮಸ್ಯೆ ಎದುರಿಸುತ್ತಿದ್ದ ಶಶಿಧರ್, ಡಯಾಲೀಸ್ ಚಿಕಿತ್ಸೆಗೆ ಒಳಗಾಗಿದ್ದರೂ, ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಶಶಿಧರ್ ಅವರ ಅಕಾಲಿಕ ನಿಧನರಾಗಿದ್ದು, ನಾಳೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.