ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತವಾಗಿದ್ದು (Accident), ಕೂದಲೆಳೆ ಅಂತರದಲ್ಲಿ ಸಚಿವ ಹಾಗೂ ಅವರ ಸಹೋದರ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾರ್ಯದ ನಿಮಿತ್ತ ಬೆಳಗಾವಿಯಿಂದ ತೆರಳುತ್ತಿದ್ದ ವೇಳೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಾಯಿಯೊಂದು ಅಡ್ಡ ಬಂದ ಹಿನ್ನಲೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮುಖ ಹಾಗೂ ಬೆನ್ನಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.