Will the dignity of the journalism profession be preserved if the news is twisted?: CMSiddaramaiah Garam

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.

ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಕಾಂಗ್ರೆಸ್ ಸಂವಿಧಾನದ ಪರವಾಗಿದೆ

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ,
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಆಲಹಳ್ಳಿ ಮೇಲ್ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿದ್ಯಾನಗರ ನಿವಾಸಿ 55 ವರ್ಷದ

[ccc_my_favorite_select_button post_id="103988"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!