ದೊಡ್ಡಬಳ್ಳಾಪುರ (Doddaballapura): ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ಅಧಿಕೃತ ಮಾನ್ಯತೆ ದೊರೆತಿದ್ದು, ದೊಡ್ಡಬಳ್ಳಾಪುರ ತಾಲೂಕು ಘಟಕವನ್ನು ರಚಿಸಲಾಗಿದೆ.
ಸಂಘದ ನೂತನ ಅಧ್ಯಕ್ಷರಾಗಿ ಪೂಜಪ್ಪ ಎನ್., ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಮಕೃಷ್ಣಯ್ಯ ಪಿ.ಎಲ್., ಖಜಾಂಚಿಯನ್ನಾಗಿ ವಿಜಯ್ ಕುಮಾರ್.ಎಸ್., ಸಂಘಟನಾ ಕಾರ್ಯದರ್ಶಿಯನ್ನಾಗಿ ರಂಗನಾಥ್, ಉಪಾಧ್ಯಕ್ಷರನ್ನಾಗಿ ಸುಮ.ಸಿ.ಆರ್
ಅವರನ್ನು ಆಯ್ಕೆಮಾಡಲಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಆನೀಸ್ ಅವರಿಗೆ ಮಾಹಿತಿ ನೀಡಲಾಗಿದ್ದು, ಶಿಷ್ಟಾಚಾರದಂತೆ ಇಲಾಖೆ ಕಾರ್ಯಕ್ರಮಗಳಲ್ಲಿ ನೂತನ ಸಂಘದ ನಿರ್ದೇಶಕರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಯಿತು.
ಈ ವೇಳೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (GPT) ಹಾಜರಿದ್ದರು.