ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಜನವರಿ 26 (ಭಾನುವಾರ)ದಂದು ಬೆಳಿಗ್ಗೆ 09.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ”76ನೇ ಗಣರಾಜ್ಯೋತ್ಸವ ದಿನಾಚರಣೆ” (republic Day) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಹೋಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತಿಯಲ್ಲಿ ಇರಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಡಾ. ಕೆ.ಸುಧಾಕರ್, ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಎಸ್.ರವಿ, ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್, ವಿಧಾನ ಪರಿಷತ್ ಶಾಸಕರಾದ ಎನ್. ನಾಗರಾಜ್(ಎಂ.ಟಿ.ಬಿ).
ಬೆಂಗಳೂರು ಪದವೀಧರರ ಕ್ಷೇತ್ರದ ಶಾಸಕರಾದ ರಾಮೋಜಿಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ. ಶಾಂತಕುಮಾರ್.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಸಿ. ಜಗನ್ನಾಥ್, ಆರ್ಥಿಕ ಇಲಾಖೆ(ಆಯವ್ಯಯ ಮತ್ತು ಸಂಪನ್ಮೂಲ) ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಪಿ.ಸಿ ಜಾಫರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಏಳು ಮಂದಿಗೆ ಸನ್ಮಾನ
2024-25ನೇ ನಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ 4ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೂವರು ಸೇರಿ 7 ಮಂದಿಯನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.
ಕೃಷಿ ಕ್ಷೇತ್ರದಿಂದ ದೊಡ್ಡಬಳ್ಳಾಪುರ ತಾಲೂಕಿನ ಲಕ್ಷ್ಮೇಗೌಡ, ಸಮಾಜ ಸೇವೆ ಅಡಿಯಲ್ಲಿ ದೇವನಹಳ್ಳಿಯ ಜಿ.ಆರ್.ಮುನಿವೀರಣ್ಣ, ಜನಪದ ಕ್ಷೇತ್ರದಿಂದ ದೊಡ್ಡಬಳ್ಳಾಪುರ ತಾಲೂಕಿನ ಓಬಮ್ಮ,.
ಕನ್ನಡಪರ ಸೇವೆಗಾಗಿ ದೊಡ್ಡಬಳ್ಳಾಪುರ ತಾಲೂಕಿನ ವಷೀರ್ ಅಹಮದ್, ಕ್ರೀಡೆ (ನೆಟ್ ಬಾಲ್) ದೇವನಹಳ್ಳಿ ತಾಲೂಕಿನ ಮನೋಜ್ ಕೆ., ಟೆಕ್ವಾಂಡೋ ಹೊಸಕೋಟೆ ತಾಲೂಕಿನ ಜಾಹ್ನವಿ, ಸಂಕೀರ್ಣ ಅಡಿಯಲ್ಲಿ ನೆಲಮಂಗಲ ತಾಲೂಕಿನ ಗೋಪಾಲ್ ಅವರನ್ನು ಸನ್ಮಾನಿಸಲಾಗುತ್ತಿದೆ.