ದೊಡ್ಡಬಳ್ಳಾಪುರ (Doddaballapura): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಕೊನಘಟ್ಟ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮಾರಬ್ಬ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪ್ರೌಢ ಶಿಕ್ಷಣ ಹಾಗೂ ಪದವಿ ಶಿಕ್ಷಣ ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಿನ ಅವಕಾಶಗಳು ಇರುತ್ತದೆ.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕೆಂದು ಹಾಗೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆದು ಎಲ್ಲರಿಗೂ ಮಾದರಿ ಆಗಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಗೋವಿಂದರಾಜು ಮಾತನಾಡಿ, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಆರೋಗ್ಯದ ಜೊತೆಗೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರಂತವೆನಿಸುತ್ತಿದೆ.
ಶಿಕ್ಷಣವನ್ನು ಉತ್ತಮವಾಗಿ ಪಡೆದಲ್ಲಿ ತಮ್ಮ ಮನೆಗೂ, ತಮ್ಮ ಊರಿಗೂ, ತಾನು ಶಿಕ್ಷಣ ಪಡೆದ ಸಂಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ. ಇದನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಶೆಯಿಂದ ಆಗುವ ಅಪಾಯದ ಬಗ್ಗೆ ಕಿರು ಚಿತ್ರ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಧಾ ಭಾಸ್ಕರ್, ವಲಯದ ಮೇಲ್ವಿಚಾರಕ ರಘು, ಸೇವಾ ಪ್ರತಿನಿಧಿ ಪುಷ್ಪ, ಪ್ರೌಢಶಾಲಾ ಹಾಗೂ ಕಾಲೇಜು ಪ್ರಾಂಶುಪಾಲರು, ಮುಖ್ಯಶಿಕ್ಷಕರು ಭಾಗವಹಿಸಿದ್ದರು.