Shock to Doddaballapur.. Preparing to relocate women's police station

ದೊಡ್ಡಬಳ್ಳಾಪುರಕ್ಕೆ ಶಾಕ್.. ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಿಸಲು ಸಿದ್ಧತೆ..?

ದೊಡ್ಡಬಳ್ಳಾಪುರ (Doddaballapura): ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು (women’s police station) ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಳಾಂತರ ಮಾಡದಿರುವಂತೆ ಒತ್ತಾಯಿಸಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ಪಿ ರವಿ (DYSP Ravi) ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ (Ramesh), ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ.

ಆದರೆ ಈ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲ ವಾಗುವುದು. ಆದ್ದರಿಂದ ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ (chandrashekar D uppar) ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಛೇರಿ, ಜಿಲ್ಲಾ ಪ್ರದಾನ ಅಂಚೆ ಕಛೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಛೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ.

ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಸ್ವತವಾಗಿ ದೊಡ್ಡಬಳ್ಳಾಪುರ ದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿವೈ ಎಸ್ಪಿ ರವಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ, ಠಾಣೆಯನ್ನು ದೊಡ್ಡಬಳ್ಳಾಪುರದಲ್ಲಿಯೇ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಚಂದ್ರಪ್ಪ, ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಮತ್ತಿತರರಿದ್ದರು.

ರಾಜಕೀಯ

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

BJP ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..; Ramalinga Reddy

[ccc_my_favorite_select_button post_id="102354"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!