A grand welcome for Kumaran in Visakhapatnam..!

ವಿಶಾಖಪಟ್ಟಣದಲ್ಲಿ ಕುಮಾರಣ್ಣನಿಗೆ ಅದ್ಧೂರಿ ಸ್ವಾಗತ..!

ವಿಶಾಖಪಟ್ಟಣ: ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಇಲ್ಲಿನ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸರ್ಕಾರ ₹11,400 ಕೋಟಿ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿದ ನಂತರ ಇಲ್ಲಿಗೆ ಆಗಮಿಸಿದ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಜನತೆ ಅದ್ದೂರಿಯಾಗಿ ಸ್ವಾಗತಿಸಿದರು.

ಗುರುವಾರ ಬೆಳಗ್ಗೆಯೇ ತಿರುಮಲದಲ್ಲಿ ಕುಟುಂಬ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಪಡೆದ ನಂತರ ವಿಶಾಖಪಟ್ಟಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಜೆಪಿ, ತೆಲುಗು ದೇಶಂ ಪಕ್ಷಗಳ ಸಂಸದರು, ಶಾಸಕರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಉಕ್ಕು ಖಾತೆ ಸಹಾಯಕ ಸಚಿವ ಹಾಗೂ ಆಂಧ್ರದ ನರಸಾಪುರ ಲೋಕಸಭೆ ಕ್ಷೇತ್ರದ ಸಂಸದ ಭೂಪತಿರಾಜು ಶ್ರೀನಿವಾಸ ವರ್ಮ ಅವರು ಜತೆಯಲ್ಲಿ ಇದ್ದರು.

ಅಲ್ಲದೆ, ಉಕ್ಕು ಕಾರ್ಖಾನೆಯ ಸಾವಿರಾರು ಕಾರ್ಮಿಕರು ಸಚಿವರನ್ನು ಎದುರುಗೊಂಡು ಸ್ವಾಗತಿಸಿದರಲ್ಲದೆ, ಪುಷ್ಪವೃಷ್ಟಿಗರೆದು ಅಭಿನಂದನೆ ಸಲ್ಲಿಸಿದರು.

ಸಂಸದ ಶ್ರಿಭರತ್, ವಿಶಾಖಪಟ್ಟಣ ಭಾಗದ ಸುಮಾರು ಹತ್ತು ಶಾಸಕರು ಸಚಿವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ವಿಮಾನ ನಿಲ್ದಾಣದಿಂದ ಕಾರ್ಖನೆವರೆಗೂ ಹದಿನಾಲ್ಕು ಕಿ.ಮೀ. ದೂರ ರಸ್ತೆಯುದ್ದಕ್ಕೂ ಜನರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿದರು. ಇಡೀ ರಸ್ತೆಯ ಇಕ್ಕೆಲಗಳಲ್ಲಿ ಸಚಿವರ ಕಟೌಟ್ ಗಳು, ಫ್ಲೆಕ್ಸ್ ಗಳು ರಾಜಿಸುತ್ತಿದ್ದರು.

ವಿಶೇಷವಾಗಿ ಗಾಜುವಾಕ ಸರ್ಕಲ್ ನಲ್ಲಿ ಕುಮಾರಸ್ವಾಮಿ ಅವರ ಬೃಹತ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಕಾರ್ಖಾನೆ ಕಾರ್ಮಿಕರು, ವಿಶಾಖ ಉಕ್ಕು ಆಂಧ್ರುಲ ಹಕ್ಕು (ವಿಶಾಖ ಉಕ್ಕು ಆಂಧ್ರರ ಹಕ್ಕು) ನಿನಾದವನ್ನು ನಿಜ ಮಾಡಿದ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು ಎನ್ನುವ ಬೃಹತ್ ಬರಹಗಳು ರಾರಾಜಿಸುತ್ತಿದ್ದವು.

ಗಾಜುವಾಕ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕಾರ್ಮಿಕ ಸಂಘಟನೆಗಳ ಸದಸ್ಯರು ಸಚಿವ ಕುಮಾರಸ್ವಾಮಿ ಅವರಿಗೆ ಬೃಹತ್ ಹಾರ ಹಾಕುವ ತಮ್ಮ ಕೃತಜ್ಞತೆ ಸಲ್ಲಿಸಿದರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; 2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ, ದೃಢ ಸಂಕಲ್ಪ ಪ್ರಧಾನಿಗಳಾದ ನರೇಂದ್ರ ಮೋದಿ ಅವರದ್ದಾಗಿದ್ದು, ಪ್ರಧಾನಿಗಳ ಆಶಯದಂತೆ ಆಂಧ್ರ ಪ್ರದೇಶದ ವೈಜಾಗ್ ಸ್ಟೀಲ್ ಪುನಶ್ಚೇತನಕ್ಕೆ ₹11,400 ಕೋಟಿಗಳ ಬೃಹತ್ ಪ್ಯಾಕೇಜ್ ಘೋಷಿಸಲಾಗಿದೆ. ಇದು ಮೋದಿ ಅವರ ಸರಕಾರ ಕೈಗೊಂಡ ಐತಿಹಾಸಿಕ ನಿರ್ಧಾರವಾಗಿದೆ ಎಂದರು.

ಪ್ಯಾಕೇಜ್ ಘೋಷಣೆ ನಂತರ ಬೆಳಗ್ಗೆ ನಾನು ಕುಟುಂಬ ಸಮೇತ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ಇಲ್ಲಿಗೆ ಬಂದಿದ್ದೇನೆ. ದೇವರ ಅನುಗ್ರಹ ಹಾಗೂ ಮೋದಿ ಅವರ ಧೃಢ ನಿರ್ಧಾರದಿಂದ ಕಾರ್ಖಾನೆಗೆ ಮರು ಜೀವ ಸಿಗುತ್ತಿದೆ ಎಂದು ಅವರು ಹೇಳಿದರು.

ರಾಜಕೀಯ

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ.

[ccc_my_favorite_select_button post_id="102385"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!