ದೊಡ್ಡಬಳ್ಳಾಪುರ: ವೃದ್ಧೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಹೊಸಹಳ್ಳಿ ಗ್ರಾಮದ ನಿವಾಸಿ ಪಾರ್ವತಮ್ಮ (65 ವರ್ಷ) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಮನೆಯಿಂದ ಹೊರ ಹೋದವರು, ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ.
ಘಟನೆಗೆ ಕಾರಣ ತಿಳಿದುಬಂದಿಲ್ಲವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.