ದೊಡ್ಡಬಳ್ಳಾಪುರ (Doddaballapura): ಅಣ್ಣ ಆತ್ಮಹತ್ಯೆ ಮಾಡಿಕೊಂಡ ಮರದ ಬಳಿಯಲ್ಲೇ ತಮ್ಮ ಕೂಡ ನೇಣುಬಿಗಿದುಕೊಂಡು (Suicide) ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತಿರುಮಗೊಂಡಹಳ್ಳಿ ಬಳಿ ನಡೆದಿದೆ.
ಮೃತರನ್ನು ತಿರುಮಗೊಂಡಹಳ್ಳಿ ನಿವಾಸಿ 45 ವರ್ಷದ ಮುನಿಕೃಷ್ಣ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಮೃತ ಮುನಿಕೃಷ್ಣ ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.