Irrigation injustice to the state should be corrected: HDD

ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯ ಸರಿ ಹೋಗಬೇಕು; ಇದೇ ನನ್ನ ಜೀವನದ ಕೊನೆಯ ಆಸೆ ಎಂದು ಭಾವುಕರಾದ ಹೆಚ್‌ಡಿ ದೇವೇಗೌಡ

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಹೇಳಿದ್ದಾರೆ.

25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೂಡಿ ಹೋರಾಟ ನಡೆಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದ ಅವರು, ನಾಡಿನ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನುವ ಭೇಧ ಮರೆತು ಒಟ್ಟಾಗಿ ಕೆಲಸ ಮಾಡಬೇಕು. ಇಂತಹ ಸಂಘಟಿತ ಪ್ರಯತ್ನಕ್ಕೆ ನಾನು ಹಿಂಜರಿಯುವುದಿಲ್ಲ ಎಂದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನೀರಾವರಿ ಯೋಜನೆಗಳ ಜಾರಿ ವಿಷಯದಲ್ಲಿ ಜೆಡಿಎಸ್ ಸುಮ್ಮನೆ ಕೂತಿಲ್ಲ, ಕೂರುವುದೂ ಇಲ್ಲ ಎಂದು ಹೇಳಿದ ದೇವೇಗೌಡರು, ನದಿ ಜೋಡಣೆ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದರು.

ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅದು ಸರಿಯಲ್ಲ. ಹಿಂದೆ ಸಿದ್ದರಾಮಯ್ಯ ಅವರು ನೀರಾವರಿ ಬಗ್ಗೆ ಚರ್ಚೆ ಮಾಡುವುದಕ್ಕೆ ನಮ್ಮ‌ ಮನೆಗೆ ಬಂದಿದ್ದರು. ಆಗ ನನಗೂ ಅವರಿಗೂ ಮಾತೇ ಇರಲಿಲ್ಲ. ಆದರೂ ನಾನು ಅವರ ಹಿಂದೆ ಹೋದೆ. ನನಗೇನು ಬೇಸರ ಇಲ್ಲ. ನೀರಾವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೇಡ.

ಸಂಸತ್ ಅಧಿವೇಶನದಲ್ಲಿ ಇದೇ ವಿಷಯ ಪ್ರಸ್ತಾಪ ಮಾಡಿ ಚರ್ಚೆ ಮಾಡಿದ್ದೇನೆ. ಗೋದಾವರಿ- ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ರಾಜ್ಯಕ್ಕೆ ನೀರಿನ ಹಂಚಿಕೆ ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು ಹಾಗೂ ಕೇಂದ್ರದ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೇನೆ.

ಈ ಬಗ್ಗೆ 2022, 2024ರಲ್ಲಿ ಜಲಶಕ್ತಿ ಸಚಿವರಿಗೆ ಪತ್ರ ಬರೆದಿದ್ದೆ. ಸದ್ಯ ಈ ಯೋಜನೆಯಲ್ಲಿ ಕರ್ನಾಟಕಕ್ಕೆ 15.891 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದೇನೆ ಎಂದು ಅವರು ಪುನರುಚ್ಚಾರ ಮಾಡಿದರು.

ಗೋದಾವರಿ ನದಿಯಿಂದ ರಾಜ್ಯಕ್ಕೆ 15.91 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿ, ಆ ನೀರನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಯಾವ ರೀತಿ ಸಾಧ್ಯ ಮಾಡುತ್ತೀರಿ? ಎನ್ನುವ ಪ್ರಶ್ನೆಯನ್ನು ನಾನು ಸಂಸತ್ತಿನಲ್ಲಿ ಕೇಳಿದ್ದೇನೆ. ಜತೆಗೆ, ಕರ್ನಾಟಕಕ್ಕೆ ಗೋದಾವರಿಯಿಂದ ಹರಿಸುವ ನೀರನ್ನು ಕಾವೇರಿಗೆ ಎಲ್ಲಿ ಜೋಡಿಸುತ್ತೀರಿ? ಎಂದು ಸಹ ಕೇಳಿದ್ದೇನೆ.

ಈ ಬಗ್ಗೆ ಯೋಜನೆಯಲ್ಲಿ ಸ್ಪಷ್ಟವಾಗಿ ತೋರಿಸಿಲ್ಲ. ಆ ಬಗ್ಗೆ ರಾಜ್ಯಕ್ಕೆ ನಿಖರವಾದ ಮಾಹಿತಿ ಬೇಕಿದೆ. ಇದರ ಕುರಿತಂತೆ ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯದ ಪರವಾಗಿ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಗಮನ ಸೆಳೆದಾಗ ಮಾಜಿ ಪ್ರಧಾನಿಗಳು, ಕಾಂಗ್ರೆಸ್ ನವರು ಅನೇಕ ನೀರಾವರಿ ಯೋಜನೆಗಳನ್ನು ಮಾಡಿದರು. ಆದರೆ, ಅನುಷ್ಠಾನಕ್ಕೆ ಹಣ ಇಡಲಿಲ್ಲ. ಅದರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ? ನಾನೇನು ಮಾಡಿದ್ದೇನೆ ಎಂಬುದಕ್ಕೆ ದಾಖಲೆ ಇದೆ.

ಕಾವೇರಿ ನೀರು ಸದ್ವಿನಿಯೋಗ ಮಾಡಿಕೊಳ್ಳಲು ನಾನೇನು ಮಾಡಿದ್ದೇನೆ ಎನ್ನುವುದಕ್ಕೆ ದೊಡ್ಡ ಇತಿಹಾಸ ಇದೆ. ಸದನದಲ್ಲಿ ನಾನು ಏನೆಲ್ಲಾ ಹೋರಾಟ ನಡೆಸಿದ್ದೇನೆ ಎನ್ನುವುದಕ್ಕೆ ದಾಖಲೆ ಇದೆ. ಪರಿಶೀಲನೆ ಮಾಡಬಹುದು.

ಭದ್ರಾ ಮೇಲ್ದಂಡೆಗೆ ಅನುಮತಿ ಕೊಡಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದೇನೆ. ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ. ಮಹದಾಯಿ ಬಗ್ಗೆ ಕೂಡ ನಾನು ಹೋರಾಟ ನಡೆಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು. ಇದು ನಮ್ಮ ಡಿಮ್ಯಾಂಡ್. ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ 25 ಟಿಎಂಸಿ ನೀರು ಕರ್ನಾಟಕಕ್ಕೆ ಹಂಚಿಕೆ ಆಗಬೇಕು. ಇದು ದೊಡ್ಡ ಗುರಿ. ರಾಜಕೀಯದ ಅಗತ್ಯ ಇಲ್ಲ. ನಮ್ಮ ನಮ್ಮ ನಡುವೆಯೇ ಭಿನ್ನಾಭಿಪ್ರಾಯ ಬೇಡ. ಒಟ್ಟಾಗಿ ರಾಜ್ಯಕ್ಕಾಗಿ ಹೊರಾಟ ಮಾಡೋಣ ಎಂದು ಅವರು ಒತ್ತಿ ಹೇಳಿದರು.

ತಮಿಳುನಾಡಿಗೆ ನೀರಿನ ಸಮಸ್ಯೆ ಇಲ್ಲ‌

ತಮಿಳುನಾಡಿಗೆ ನೀರಿನ ಸಮಸ್ಯೆ ಇಲ್ಲ‌. ಯಥೇಚ್ಚವಾಗಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಈ ಬಗ್ಗೆ ಸಂಸತ್ ನಲ್ಲಿ ಮಾತಾಡೋವಾಗ ತಮಿಳುನಾಡಿನವರು ವಿರೋಧ ಮಾಡಲಿಲ್ಲ.

ನೀರು ಪಡೆಯಲು ನಾವು ಪಕ್ಷಬೇಧ ಮರೆತು ಒಟ್ಟಾಗಿ ಹೋರಾಟ ಮಾಡುತ್ತೇವೆ. ನನಗೆ ಆ ವಿಶ್ವಾಸ ಇದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಗೋದಾವರಿ-ಕಾವೇರಿ ಬಗ್ಗೆ ಸಂಸತ್ ನಲ್ಲಿ ನಾನು ಮಾತಾಡಿದ್ದೇನೆ. ತಮಿಳುನಾಡಿನ ಎಲ್ಲಾ ರಾಜ್ಯಸಭೆ ಸದಸ್ಯರು ಒಕ್ಕೊರಳಿನಿಂದ ಗೋದಾವರಿ, ಕಾವೇರಿ ಅಂತ ಕೂಗಿದರು. ಇದರಲ್ಲಿ ಕರ್ನಾಟಕದ ಹೋರಾಟ ಮೊದಲಿನಿಂದಲೂ ಇದೆ. ನಾನು ನೀರಾವರಿ ಮಂತ್ರಿ ಆಗಿದ್ದಾಗಿನಿಂದ ಹೋರಾಟ ನಡೆಯುತ್ತಲೇ ಇದೆ. ಕಾವೇರಿ ನೀರು ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದೆ.

ಇದನ್ನು ಮೋದಿ ಅವರ ಗಮನಕ್ಕೆ ತಂದಿದ್ದೇನೆ. ನಮ್ಮ ರಾಜ್ಯದ ಒಬ್ಬರು ಪುಣ್ಯಾತ್ಮರು ನೀರು ಕೊಡುತ್ತೇನೆ ಎಂದು ಹೇಳಿದ್ದಾರೆ. ಅವರು ನೀರು ಕೊಟ್ಟರೆ ಸಂತೋಷ. ಚಿತ್ರದುರ್ಗ, ತುಮಕೂರು ಸೇರಿದಂತೆ ನೀರೇ ಕಾಣದ ಪ್ರದೇಶಗಳಿಗೆ ನೀರು ಹೋಗಬೇಕು. ಎಲ್ಲಿಂದಾದರೂ ನೀರು ಕೊಡಲಿ ಎಂದು ಅವರು ಹೇಳಿದರು.

ಕೊನೆಯ ಆಸೆ ಎಂದು ಭಾವುಕರಾದರು

ರಾಜ್ಯಕ್ಕೆ ನೀರಿನ ವಿಷಯದಲ್ಲಿ ನ್ಯಾಯ ಸಿಗಬೇಕು. ಅದೇ ನನ್ನ ಜೀವನದ ಕೊನೆಯ ಆಸೆ. ಈ ದೇಹ ಅಂತ್ಯ ಆಗುವುದರ ಒಳಗಾಗಿ ನಮ್ಮ ರಾಜ್ಯಕ್ಕೆ ನೀರಾವರಿ ವಿಷಯದಲ್ಲಿ ಆಗಿರುವ ಅನ್ಯಾಯ ಸರಿ ಹೋಗಬೇಕು.

ನಾನು ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಿನ ಸಮಸ್ಯೆ ಬಗೆಹರಿಸಬೇಕು ಎನ್ನುವ ಛಲವಿದೆ, ಬಗೆಹರಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಭಾವುಕರಾಗಿ ಹೇಳಿದರು.

ಅನ್ಯಾಯ ಸರಿ ಮಾಡಬೇಕಿದೆ

ಕಾವೇರಿ, ಕಳಸಾ ಬಂಡೂರಿ ಯೋಜನೆಗಳಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ ಆಗಿದೆ. ಈಗ ಗೋದಾವರಿ – ಕಾವೇರಿ ಜೋಡಣೆ ಯೋಜನೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ನಾವು ದನಿಯೆತ್ತಬೇಕಿದೆ.

ಕಳಸಾ ಬಂಡೂರಿ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ಈ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ. ಹೀಗಾಗಿ ಪ್ರಧಾನಿಗಳು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ.

ನಮ್ಮ ವಕೀಲರು ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿ ಗೆಲ್ಲಬೇಕು. ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಸಿಕ್ಕಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಮೊದಲು ಬಿಡುಗಡೆ ಮಾಡಲಿ. ರಾಜ್ಯ ಸರ್ಕಾರ ಅನೇಕ ನೀರಾವರಿ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಹಣ ಕೊಡಲು ಸಾಧ್ಯವಾಗಿಲ್ಲ. ಅವರು ಮೊದಲು ಆ ಕೆಲಸ ಮಾಡಲಿ ಎಂದು ಎಂದು ತಿರುಗೇಟು ನೀಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ, ಜವರಾಯಿ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಜೆಡಿಎಸ್ ನಿಂದ ಬೃಹತ್ ಸಮಾವೇಶ

ಜೆಡಿಎಸ್ ಪಕ್ಷದಿಂದ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಪಕ್ಷದ ರಾಷ್ಟ್ರಾಧ್ಯಕ್ಷರೂ ಆಗಿರುವ ದೇವೇಗೌಡರು ಹೇಳಿದರು.

ಪಕ್ಷ ಸಂಘಟನೆ ಹಾಗೂ ಜನಪರ ವಿಷಯಗಳನ್ನು ಇಟ್ಟುಕೊಂಡು ಸಮಾವೇಶ ನಡೆಸಬೇಕು ಎನ್ನುವುದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಉದ್ದೇಶ. ಅದಕ್ಕಾಗಿ ಮಾರ್ಚ್ 6ರಂದು ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದೇವೆ. ಅಂದು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದರು.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!