ಬೆಂಗಳೂರು; ಇಂದು ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಗಿಫ್ಟ್ ರೂಪದಲ್ಲಿ ಅಭಿಮಾನಿಗಳಿಗೆ ದಿ ಡೆವಿಲ್ (The Devil) ಟೀಸರ್ ನೀಡಲಾಗಿದೆ.
ಡಿಬಾಸ್ ದರ್ಶನ್ ನಟನೆಯ ದಿ ಡೆವಿಲ್ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.
ನಟ ದರ್ಶನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಆರೋಗ್ಯದ ಸಮಸ್ಯೆ ಕಾರಣ ಅಭಿಮಾನಿಗಳು ಜೊತೆ ಸಂಭ್ರಮಾಚರಣೆ ಮಾಡುತ್ತಿಲ್ಲ. ಆದರೆ ಆ ಕೊರತೆ ದೂರ ಮಾಡಲು ‘ದಿ ಡೆವಿಲ್’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ.
ಮಿಲನ ಪ್ರಕಾಶ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ದೊಡ್ಡದು. ಟೀಸರ್ ಮೂಲಕ ಆ ನಿರೀಕ್ಷೆಯನ್ನು ಡಬಲ್ ಮಾಡಲಾಗಿದೆ.
ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’. ಹಾಗಾಗಿ ಈ ಸಿನಿಮಾ ಮೇಲೆ ಇರುವ ನಿರೀಕ್ಷೆ ದೊಡ್ಡದು.
‘ದಿ ಡೆವಿಲ್’ ಸಿನಿಮಾ ಟೀಸರ್ ಇಲ್ಲಿದೆ