ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ವಿವಿದೋಧ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ (VSSN) ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಸಲಾಗಿದೆ.
ಚುನಾವಣೆ ಅಧಿಕಾರಿ ನಾಗಮಣಿ ಕೆಎನ್ ಅವರ ಸಮ್ಮುಖದಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ರಾಮಯ್ಯ (ರಾಮಣ್ಣ) ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಆನಂದ ಎಸ್.ಎನ್ (JCB) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
11 ಸದಸ್ಯತ್ವ ಬಲದ ಸಾಸಲು ವಿವಿದೋಧ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿರ್ದೇಶಕರಾಗಿ ಕಾಂಗ್ರೆಸ್ ಬೆಂಬಲಿತ 4, ಜೆಡಿಎಸ್ ಬೆಂಬಲಿತ 4 ಹಾಗೂ ಬಿಜೆಪಿ ಬೆಂಬಲಿತ 3 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿಕಟಪೂರ್ವ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಮಣ್ಣ, ತಾಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್, ಪಿಎಲ್‌ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿಸಿ ನರಸಿಂಹಮೂರ್ತಿ ಸೇರಿದ ವಿಎಸ್ಎಸ್ ಎನ್ ನಿರ್ದೆಶಕರು ಶುಭಕೋರಿದ್ದಾರೆ.