ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಪೇರಿಸಿತು. ಗುರಿಯನ್ನು ಬೆನ್ನಟ್ಟಿದ ಭಾರತ ಒಂದು ಓವರ್ ಬಾಕಿ ಇರುವಾಗಲೇ ಜಯ ಸಾಧಿಸಿತು.
ಇದರ ಮೂಲಕ ಭಾರತ ಎರಡನೇ ಸಲ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತು. 2013ರಲ್ಲೂ ಭಾರತ ಈ ಟ್ರೋಫಿ ಜಯಿಸಿತ್ತು.