ದೊಡ್ಡಬಳ್ಳಾಪುರ (Doddaballapura); ತಾಲೂಕಿನ ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸ ನಾಳೆ (ಮಾ.14) ನಡೆಸಲು ಸಕಲ ಸಿದ್ದತೆ ನಡೆದಿದೆ.
ಬ್ರಹ್ಮರಥೋತ್ಸದ ಅಂಗವಾಗಿ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ 12-12 ರಿಂದ 1ಗಂಟೆ ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.
ರಥೋತ್ಸವದ ಪ್ರಯುಕ್ತ ಅನ್ನಸಂತರ್ಪಣೆ ಹಾಗೂ ಪಾನಕ, ನೀರ್ಮಜ್ಜಿಗೆ ವಿತರಣೆಗೆ ವಿವಿಧ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ರಾತ್ರಿ 7 ಗಂಟೆಗೆ ಆಕರ್ಷಕ ವರ್ಣರಜಿಂತ ಬಾಣ ಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
ಬ್ರಹ್ಮ ರಥೋತ್ಸವದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ, ಸಂಸದ ಸುಧಾಕರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.