ದೊಡ್ಡಬಳ್ಳಾಪುರ (Doddaballapura): ನಗರದ ಅರ್ಕಾವತಿ ಬಡಾವಣೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವ ಸಂಭ್ರಮದಿಂದ ನೆರವೇರಿತು.
ತಾಲೂಕಿನ ವಿವಿದೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ರಥಕ್ಕೆ ಹಣ್ಣು ದವನ ಸಮರ್ಪಿಸಿ ಸ್ವಾಮಿಯ ದರ್ಶನ ಪಡೆದರು.
ರಥೋತ್ಸವದಲ್ಲಿ ತಮಟೆ, ಮಂಗಳ ವಾದ್ಯದೊಂದಿಗೆ ವೀರಗಾಸೆ ಕುಣಿತ ಕಲಾತಂಡಗಳು ಭಾಗವಹಿಸಿದ್ದವು.
ಲಕ್ಷ್ಮೀ ನರಸಿಂಹಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕಕ್ರಮಗಳು ಜರುಗಿದವು.
ಬ್ರಹ್ಮರಥೋತ್ಸವದ ಅಂಗವಾಗಿ ತಿರುಕಲ್ಯಾಣೋತ್ಸವ, ಚತುಸ್ಥ್ಸಾನಾರ್ಚನೆ, ಪೂರ್ಣಾಹುತಿ, ತೀರ್ಥಗೋಷ್ಟಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮೊದಲಾದ ವಿಶೇಷ ಪೂಜಾ ಕಾರ್ಯಾಕ್ರಮಗಳು ಜರುಗಿದವು.
ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.