ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ.
ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾದ ಗ್ರಾಮದ ಹೊರ ಭಾಗದಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮೃತಳ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.