Suspension of 18 MLAs.. B.Y. Vijayendra told BJP's next move

18 ಶಾಸಕರ ಅಮಾನತು.. ಬಿಜೆಪಿಯ ಮುಂದಿನ ನಡೆ ತಿಳಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನುಡಿದರು.

ಕೆಂಗಲ್ ಪ್ರತಿಮೆಯ ಎದುರು ಪ್ರತಿಭಟನೆ

ಅಧಿವೇಶನ ಮುಗಿಯುವ ಕೊನೆಯ ದಿನ ಗೌರವಾನ್ವಿತ ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಸರಿಯಲ್ಲ, 2ರಂದು ಬೆಳಿಗ್ಗೆ ವಿಧಾನಸೌಧ ಮುಂಭಾಗದ ಕೆಂಗಲ್ ಪ್ರತಿಮೆಯ ಮುಂದೆ ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತೇವೆ. ಸ್ಪೀಕರ್ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಸ್ಪೀಕರ್ ಅವರ ತೀರ್ಮಾನವು ಮತದಾರರಿಗೆ ಮಾಡಿದ ಅವಮಾನ ಎಂದು ತಿಳಿಸಿದರು. 18 ಶಾಸಕರ ಅಮಾನತನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು ಕಮಿಟಿ ಮೀಟಿಂಗ್‍ಗಳಿಗೆ ಹಾಜರಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

4ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 5ರಂದು ಎಲ್ಲ ಮಂಡಲಗಳಲ್ಲಿ ಸಹ ಬೆಲೆ ಏರಿಕೆಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ ಏರಿಸಿದರು. ಪೆಟ್ರೋಲ್ ದರ ಹೆಚ್ಚಿಸಿದರು. ಹಾಲಿನ ದರವನ್ನೂ ಮೂರನೇ ಬಾರಿಗೆ ಜಾಸ್ತಿ ಮಾಡಿದ್ದಾರೆ. ಹಾಲಿನ ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆ ಸರಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಹಿಂದೂಗಳಿಗೆ ಮಾಡಿದ ಅವಮಾನದ ವಿರುದ್ಧ ಜನಜಾಗೃತಿ

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರದ ವರಿಷ್ಠರು ಹಲವು ಬಾರಿ ಬಸನಗೌಡಪಾಟೀಲ ಯತ್ನಾಳರಿಗೆ ನೋಟಿಸ್ ಕೊಟ್ಟು ಅವರನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ. ರಾಜ್ಯಾಧ್ಯಕ್ಷನಾಗಿ ನಾನು ಪಕ್ಷದ ಮುಖಂಡರ ಜೊತೆ ಯತ್ನಾಳರನ್ನು ಭೇಟಿ ಮಾಡಿ ಪಕ್ಷದ ಹಿತದೃಷ್ಟಿಯಿಂದ ಸಣ್ಣಪುಟ್ಟ ಗೊಂದಲ ಸರಿಪಡಿಸಿಕೊಳ್ಳೋಣ ಎಂದಿದ್ದೆ. ಸದನ ಇದ್ದಾಗ ಭೋಜನಕೂಟಕ್ಕೂ ನಾನೇ ಆಹ್ವಾನಿಸಿದ್ದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ನಾನು ಹಿಂದೊಂದು ಮುಂದೊಂದು ಮಾತನಾಡುವ ವ್ಯಕ್ತಿಯಲ್ಲ

ಯಡಿಯೂರಪ್ಪನವರು ಅನೇಕರನ್ನು ಬೆಳೆಸಿದ್ದಾರೆ. ಅವರು ತಮ್ಮ ಜೀವನದಲ್ಲಿ ಮತ್ತೊಬ್ಬರನ್ನು ತುಳಿಯುವ ಕೆಲಸ ಮಾಡಿಲ್ಲ. ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯದ ಅರಿವು ನನಗೂ ಇದೆ. ಎಲ್ಲವನ್ನೂ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ವಿವರಿಸಿದರು.

ಪಕ್ಷದ ಕೇಂದ್ರದ ವರಿಷ್ಠರು ಸಾಕಷ್ಟು ಸಮಯ ಕಾದಿದ್ದಾರೆ. ವರಿಷ್ಠರು ಇದೆಲ್ಲವನ್ನೂ ಗಮನಿಸಿ ಉಚ್ಚಾಟನೆಯ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನನಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಆಗಬೇಕೆಂದು ಅಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. Gabriel Boric Font

[ccc_my_favorite_select_button post_id="104973"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಏಪ್ರಿಲ್ 5 ರಂದು ಬೆಂ.ಗ್ರಾ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

ಏಪ್ರಿಲ್ 5 ರಂದು ಬೆಂ.ಗ್ರಾ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (Sports Meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ (Cultural competitions)

[ccc_my_favorite_select_button post_id="104945"]
ಕಿಡ್ನಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲ

ಕಿಡ್ನಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲ

ನಿರೀಕ್ಷಣಾ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. Bhavani Revanna

[ccc_my_favorite_select_button post_id="104976"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!