Not for the people.. Yediyurappa protests to save his son's chair; Yatnal

ಜನರಿಗಾಗಿ ಅಲ್ಲ.. ಮಗನ ಕುರ್ಚಿ ಉಳಿಸೋಕೆ ಯಡಿಯೂರಪ್ಪ ಪ್ರತಿಭಟನೆ; ಯತ್ನಾಳ್ ಲೇವಡಿ

ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ಬಿಜೆಪಿ (BJP) ನಡೆಸಿದ ಅಹೋರಾತ್ರಿ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಭಾಗಿಯಾದ ಕುರಿತು ನಿರೀಕ್ಷೆಯಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Banana Gouda Patila Yatnal) ಲೇವಡಿ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಜನರಿಗಾಗಿ ಅಲ್ಲ‌. ಅವರ ಮಗನ ಕುರ್ಚಿಯನ್ನು ಗಟ್ಟಿ ಮಾಡಲಿಕ್ಕಾಗಿ ಮಾತ್ರ ಎಂದು ಕುಟುಕಿದ್ದಾರೆ.

ತಾನು ಸಾಯೋಕಿಂತ ಮುಂಚೆ, ತನ್ನ ನಂತರ ಮಗನ ಮುಖ್ಯಮಂತ್ರಿಯಾಗಿ ನೋಡಬೇಕು, ಇನ್ನಷ್ಟು ಕರ್ನಾಟಕವನ್ನು ಲೂಟಿ ಮಾಡಬೇಕು..ಈಗ ಬರೀ ಮಾರಿಷಸ್, ದುಬಯ್‌ ಅಲ್ಲಿ ಮಾತ್ರ ಆಸ್ತಿ ಇದೆ. ಮುಂದೆ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಆಸ್ತಿ ಮಾಡಬೇಕು ಎಂಬುದು ಅವರ ಉದ್ದೇಶ.

ಇದಕ್ಕಾಗಿ ಅಷ್ಟು ವಯಸ್ಸಾದರೂ ಮನೆಯಲ್ಲಿ ಕೂರಲಾಗದೆ, ಹೊರಗೆ ಬಂದು ಹೋರಾಟ ಮಾಡ್ತಾ ಇರೋದು ಈ ರಾಜ್ಯದ ಬಡವರ ಸಲುವಾಗಿ ಅಲ್ಲ, ರೈತರ ಸಲುವಾಗಿ ಅಲ್ಲ, ತನ್ನ ಮಗನ ಕುರ್ಚಿ ಗಟ್ಟಿ ಮಾಡಲಿಕ್ಕೆ.

ಏಕೆಂದರೆ ಇದೇ ರೀತಿ ಬ್ಲಾಕ್ ಮೇಲ್ ಮಾಡಿ, ನನ್ನ ಮಗನ ತಗುದ್ರೆ, ಯತ್ನಾಳ್ ನ ಉಚ್ಚಾಟನೆ ಮಾಡದಿದ್ದರೆ ನೇಣಾಕೋತ್ತೀನಿ ಅಂತ ಅಮಿತ್ ಶಾಗೆ ಬ್ಲಾಕ್ ಮೇಲ್ ಮಾಡುವಂತ ಕೆಳಮಟ್ಟದ ರಾಜಕಾರಣ ಮಾಡಿ, ಈ ಇಳಿವಯಸ್ಸು ಎಣಿಸ್ತಾ ಇದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಲಿಂಗಾಯತನೇ ಅಲ್ಲ‌‌ ಸಾಕ್ಷಿ ಇದ್ರೆ ಕೊಡ್ಲಿ ಯಡಿಯೂರಪ್ಪ, ಬೂಕನಕೆರೆಯಲ್ಲಿ ಶಾಲೆಯ ದಾಖಲೆ ಪರಿಶೀಲನೆ ಮಾಡ್ಲಿ, ಸುಮ್ಮನೆ ವೀರಶೈವ ಲಿಂಗಾಯತ ಅಂತ ಹೇಳ್ಕೊಂಡು, ನಾಲ್ಕು ಮಠಾಧೀಶರನ್ನು ಹಿಡ್ಕೊಂಡು, ದುಡ್ ಕೊಟ್ಟು ಅವರಿಂದ ಯಡಿಯೂರಪ್ಪನ ಬಿಟ್ ಬಿಟ್ರೆ ಲಿಂಗಾಯತರು, ವೀರಶೈವರು ಬಿಜೆಪಿನ ಬಿಟ್ ಬಿಡ್ತಾರೆ ಅಂತ ಹೇಳಿಕೆ ಕೊಡಿಸೋದು. ನಂತರ ಅಪ್ಪ, ಮಕ್ಕಳು ಮಜಾ ಮಾಡೋದು ಎಂದು ಯತ್ನಾಳ್‌ ಕಿಡಿ ಕಾರಿದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]