Akshara jathre to be launched tomorrow in Kanasavadi

ಕನಸವಾಡಿಯಲ್ಲಿ ಅಕ್ಷರ ಜಾತ್ರೆಗೆ ಕ್ಷಣಗಣನೆ ಆರಂಭ

ದೊಡ್ಡಬಳ್ಳಾಪುರ; ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ (Kanasavadi) ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಂಡಿದ್ದು, ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿವಂಗತ ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸ್ದದಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಮಧುರೆ ಹೋಬಳಿಯ ಸ್ಥಳೀಯ ಆಡಳಿತ, ಮುಖಂಡರು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್‌ ಮುನಿರಾಜ್‌ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗಣ್ಯರು ಭಾಗವಹಿಸಲಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅವರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕನ್ನಡಪರ ಚಿಂತಕರು, ಸಾಹಿತಿಗಳು, ಸ್ಥಳೀಯ ಸಾಧಕರು ವಿವಿಧ ವಿಚಾರಗೋಷ್ಠಿ, ಕವಿಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. 50ಕ್ಕೂ ಹೆಚ್ಚಿನ ಸಾಧಕ ಗಣ್ಯರಿಗೆ ಪುರಸ್ಕಾರ ನೀಡಲಾಗುತ್ತಿದೆ.

ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತ ಯೋಜಿಸಿದೆ. ಎರಡೂ ದಿನಗಳ ಕಾಲ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

ಇಂದಿನಿಂದ 2 ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭುದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಚಿಂತಕ ಕೆ.ರಾಜಕುಮಾರ್ ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

2ನೇ ದಿನವಾದ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ದಿ ಮತ್ತು ಆತಂಕಗಳು ಕುರಿತ ವಿಚಾರಗೋಷ್ಠಿ ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾವಯವ ಕೃಷಿ ತಜ್ಞ ಡಾ.ಶಿವನಾಪುರ ರಮೇಶ್, ಜಗನ್ನಾಥ್‌ಪ್ರಕಾಶ್‌ ವಿಷಯ ಮಂಡನೆ ಮಾಡುವರು.

ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸನ್ಮಾ ಹಾಗೂ ಸಮಾರೋಪ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!