ಕರೊನಾ ಇದು ಸರಿನಾ..? ಧ್ವನಿ ಸುರುಳಿ ಬಿಡುಗಡೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಹರ ಮ್ಯೂಸಿಕಲ್ ವಲ್ರ್ಡ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತಾಶ್ರಯಲ್ಲಿ  ಬುಧವಾರ ಜಿಲ್ಲಾಡಳಿತ ಭವನದ ತುಂಗಾಭದ್ರಾ ಸಂಭಾಗಣದಲ್ಲಿ ಆಯೋಜಿಸಲಾಗಿದ್ದ ‘ಕರೊನಾ ಇದು ಸರಿನಾ’ ಎಂಬ ಧ್ವನಿ ಸುರುಳಿ ಬಿಡುಗಡೆ  ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ ಸೇರಿದಂತೆ ಕೊರೊನಾ ವಿರುದ್ದ ಹೋರಾಡುತ್ತಿರುವ ಕರೊನಾ ಸೈನಿಕರಿಗೆ ಮತ್ತು ಪೌರ ಕಾರ್ಮಿಕರಿಗೆ, ಡಿಸಿ, ಎಸ್ಪಿ ಸೇರಿದಂತೆ ಜಿಲ್ಲಾಡಳಿತದ ವತಿಯಿಂದ ಹೂ ಮಳೆ ಸುರಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಸ್.ಷಡಾಕ್ಷರಿ ಮಾತನಾಡಿ, ಕೋವಿಡ್-19 ಸಂಬಂಧಿಸಿದಂತೆ ಲಾಕ್‍ಡೌನ್ ಆಗಿರುವ ಸಂದರ್ಭದಲ್ಲಿ ಸರ್ಕಾರಿ ನೌಕರರು ಕೋವಿಡ್ ವಿರುದ್ದ ಹೋರಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹದಲ್ಲಿ ನೆರೆ ಸಂತ್ರಸ್ತರ ಪರವಾಗಿ ಹಾಗೂ ಲಾಕ್‍ಡೌನ್ ಸಮಯದಲ್ಲಿ ತಮ್ಮ ಒಂದು ದಿನದ ವೇತನ ಒಟ್ಟು ರೂ. 200 ಕೋಟಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದೇವೆ ಎಂದರು.

ಗ್ರಾಮ ಮಟ್ಟದಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಸೇರಿದಂತೆ ಹಲವು ಇಲಾಖೆಗಳ ಸರ್ಕಾರಿ ನೌಕರರು ಕೊರೊನಾ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಉತ್ತರ ಕರ್ನಾಟಕದದಲ್ಲಿ ನೆರೆ ಸಂಭವಿಸಿದಾಗಲೂ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ದೆಹಲಿ, ತಮಿಳುನಾಡು ಇತರೆ ರಾಜ್ಯಗಳಿಗೆ  ಹೋಲಿಸಿದರೆ ಕರ್ನಾಟಕದಲ್ಲಿ ಸರ್ಕಾರಿ ನೌಕರರು ಹೆಚ್ಚು ವೇತನವನ್ನು ಸರ್ಕಾರಕ್ಕೆ ನೀಡಿದ್ದಾರೆ ಎಂದು ಪ್ರಶಂಸಿದ ಅವರು ಮುಂದಿನ ದಿನಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯ ಮೂಲಕ ನೌಕರರಿಗೆ ನಗದುರಹಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಕೋವಿಡ್-19 ಸಂಬಂಧ ಯಾವ ನೌಕರರು ಭಯ ಪಡುವುದು ಬೇಡ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಸರ್ಕಾರಿ ನೌಕರರ ವೇತನ ಮತ್ತು ಡಿಎ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವದು. ಸರ್ಕಾರ ನಮ್ಮೊಂದಿಗಿದೆ. ನೌಕರರು ಈ ಕುರಿತು ಯಾವುದೇ ಆತಂಕಕ್ಕೆ ಒಳಪಡುವುದು ಬೇಡ. ಜೊತೆಗೆ ಜಿಲ್ಲಾಧಿಕಾರಿಗಳು ನೌಕರರ ಪರವಾಗಿದ್ದಾರೆ. ಈ ಮೂಲಕ ನಮ್ಮೆಲ್ಲರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,  ಕೋವಿಡ್-19 ಸಂದರ್ಭದಲ್ಲಿ ಸರ್ಕಾರಿ ನೌಕರರು ಒಟ್ಟು 13 ಕಂಟೈನ್‍ಮೆಂಟ್ ಜೋನ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಕೋವಿಡ್ ಸೋಂಕಿತರು ಇನ್ನೂ ಹೆಚ್ಚಾದರು ಸಹ ಸರ್ಕಾರಿ ನೌಕರರು ಎಂದೆಂದಿಗೂ ನಮ್ಮ ಜೊತೆ ಇರುತ್ತಾರೆ ಎಂಬ ಭರವಸೆಯಿದೆ ಎಂದ ಅವರು ಜಿಲ್ಲೆಯಲ್ಲಿ  ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಎಲ್ಲಾ ಸರ್ಕಾರಿ ನೌಕರರು ಕೋವಿಡ್ ಯುದ್ದದಲ್ಲಿ ಹೋರಾಡಲು ಭಾಗಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಕೋವಿಡ್-19 ನಿಂದ ಜಿಲ್ಲೆ ಇನ್ನೂ ಮುಕ್ತವಾಗಿಲ್ಲ. ಸಾರ್ವಜನಿಕರು ತುಂಬಾ ಜಾಗರೂಕತೆಯಿಂದ ಇರಬೇಕು. ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣಕಾಸಿನ ಅನುಕೂಲಕ್ಕಾಗಿ ಇಂದು ಮೊಬೈಲ್ ಎ.ಟಿ.ಎಂ ಅನ್ನು ಉದ್ಘಾಟನೆ ಮಾಡುತ್ತಿದ್ದೇವೆ. ಲಾಕಡೌನ್ ಸಮಯದಲ್ಲಿ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗಿದೆ. ನಾವು ನಿಮ್ಮೊಂದಿಗೆ  ಇದ್ದೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಬಿ. ಪಾಲಾಕ್ಷಿ,  ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್,  ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸರ್ಕಾರಿ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

BY Vijayendra| ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು ಸಿಬಿಐ ತನಿಖೆ ಮಾಡಿಸಲು ವಿಜಯೇಂದ್ರ ಒತ್ತಾಯ

BY Vijayendra| ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು ಸಿಬಿಐ ತನಿಖೆ ಮಾಡಿಸಲು ವಿಜಯೇಂದ್ರ

ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. BY Vijayendra

[ccc_my_favorite_select_button post_id="99759"]
Vedavyasachar Srishananda| ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ದೊಡ್ಡಬಳ್ಳಾಪುರಕ್ಕೆ ದಿಢೀರ್ ಭೇಟಿ..!| Video

Vedavyasachar Srishananda| ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ದೊಡ್ಡಬಳ್ಳಾಪುರಕ್ಕೆ ದಿಢೀರ್ ಭೇಟಿ..!| Video

ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. Vedavyasachar Srishananda

[ccc_my_favorite_select_button post_id="99791"]
ಇಸ್ರೋದ ಸ್ಪೈಡೆಕ್ಸ್ ಸ್ಯಾಟಲೈಟ್ ಗೆ ರಾಜ್ಯದ BGS ಕಾಲೇಜಿನ ಪೆಲೋಡ್ ಸಹ ಸೇರ್ಪಡೆ..!

ಇಸ್ರೋದ ಸ್ಪೈಡೆಕ್ಸ್ ಸ್ಯಾಟಲೈಟ್ ಗೆ ರಾಜ್ಯದ BGS ಕಾಲೇಜಿನ ಪೆಲೋಡ್ ಸಹ ಸೇರ್ಪಡೆ..!

ರಾಜ್ಯದ ಪ್ರತಿಷ್ಟಿತ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವತಿಯಿಂದ (BGS) ಅರ್ಪಿತ್ ಪೆಲೋಡ್ ಒದಗಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ

[ccc_my_favorite_select_button post_id="99796"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
RTO ಕಚೇರಿಯಲ್ಲಿ ಕಂಪ್ಯೂಟರ್ ಗಳ ಕದ್ದೊಯ್ದ ಕಳ್ಳರು..!

RTO ಕಚೇರಿಯಲ್ಲಿ ಕಂಪ್ಯೂಟರ್ ಗಳ ಕದ್ದೊಯ್ದ ಕಳ್ಳರು..!

ಹಿಂಭಾಗದ ಮೂಲಕ ಎಂಟ್ರಿ ಕೊಟ್ಟಿರೋ ಇಬ್ಬರು ಕಳ್ಳರು, ಕಚೇರಿಯ ಬೀಗ ಕಟ್ ಮಾಡಿ, RTO

[ccc_my_favorite_select_button post_id="99788"]
Accident: ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ

Accident: ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ

ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿ. Accident

[ccc_my_favorite_select_button post_id="99752"]

Accident: ಕಾರು- ಬಸ್ ನಡುವೆ ಅಪಘಾತ.. 2

[ccc_my_favorite_select_button post_id="99729"]

Accident; ಕಂದಕಕ್ಕೆ ಬಿದ್ದ ಕಾರು: ತಂದೆ, ಮಗ

[ccc_my_favorite_select_button post_id="99679"]

Accident: ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿಗಳು..!

[ccc_my_favorite_select_button post_id="99666"]

ಆರೋಗ್ಯ

ಸಿನಿಮಾ

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ ತೆಲುಗು ಚಿತ್ರರಂಗ..!

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ

ಸಭೆ ಯಶಸ್ವಿಯಾಗಿಲ್ಲ ಎನ್ನಲಾಗುತ್ತಿದೆ. ಬೆನಿಫಿಟ್ ಶೋಗಳಿಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ Pushpa 2

[ccc_my_favorite_select_button post_id="99541"]
error: Content is protected !!