ದೊಡ್ಡಬಳ್ಳಾಪುರ ರಾಜ್ಯದಲ್ಲಿ ಕರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ,ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಅಲ್ಲ. ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಅವಸರದ ತೀರ್ಮಾನ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ
ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು,ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಂದಿಟ್ಟಿದ್ದಾರೆ. ಇದರಿಂದ ಆತಂಕಕ್ಕೀಡಾಗಿರುವ ಪೋಷಕರು ಈ ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ.
ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದಿದ್ದಾರೆ.