ದೊಡ್ಡಬಳ್ಳಾಪುರ : ಕರೊನಾ ಸೋಂಕಿನ ಕಾರಣ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಆರಂಭವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಿದ್ದು,ಈ ಜಿಲ್ಲೆಯ 8,743 ವಿದ್ಯಾರ್ಥಿಗಳು ಒಳಗೊಂಡಂತೆ 117 ಹೊರ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎನ್ನಲಾಗುತ್ತಿದ್ದು ಪರೀಕ್ಷೆಗೆ ಗೈರಾದವರ ಮಾಹಿತಿ ಬರಬೇಕಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪರಿಕ್ಷಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿ,ಸಾಮಾಜಿಕ ಅಂತರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು.ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸುವ ಮೂಲಕ ಕರೊನಾ ವೈರಾಣು ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿತ್ತು.
ದೊಡ್ಡಬಳ್ಳಾಪುರದ ಸರ್ಕಾರಿ ಪದವಿಪೂರ್ವ ಕಾಲೇಜು,ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು,ಶ್ರೀದೇವರಾಜ ಅರಸ್ ಪದವಿ ಪೂರ್ವ ಕಾಲೇಜು,ದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು,ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು,ಪ್ರಗತಿ ಪದವಿ ಪೂರ್ವ ಕಾಲೇಜು,ಹೊಸಕೋಟೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು,ನಂದಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜು,ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು,ಬಸವೇಶ್ವರ ಪದವಿ ಪೂರ್ವ ಕಾಲೇಜು,ಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜು,ತ್ಯಾಮಗೊಂಡ್ಲುವಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ವೈದ್ಯಕೀಯ ಸಿಬ್ಬಂದಿಗಳ ನಿಯೋಜಿನೆ, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣ ಹಾಗೂ ಕೊಠಡಿಯ ಒಳಗೆ ಸಂಪೂರ್ಣವಾಗಿ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಯಾರಿಗೂ ಮೊಬೈಲ್ ಕೊಂಡೊಯ್ಯಲು ಅವಕಾಶವಿರಲಿಲ್ಲ. ಪರೀಕ್ಷೆಯು ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯುತ್ತಿದ್ದು,ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲಾಗಿತ್ತು.ಕೆಲವು ವಿದ್ಯಾರ್ಥಿಗಳು ತಮ್ಮ ಸ್ವಂತ ವಾಹನದಲ್ಲಿ ಬಂದಿದ್ದರು.
********