ದೊಡ್ಡಬಳ್ಳಾಪುರ: ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದ ಗೋಪಾಲಕೃಷ್ಣ ಎನ್ನುವವರು ಆಸ್ಪತ್ರೆಯಲ್ಲಿನ ಚಿಕಿತ್ಸಾ ಸೌಲಭ್ಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಮೆಚ್ಚಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸುಧಾಕರ್.ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದ ಗೋಪಾಲಕೃಷ್ಣ ಎನ್ನುವವರು ಆಸ್ಪತ್ರೆಯಲ್ಲಿನ ಚಿಕಿತ್ಸಾ ಸೌಲಭ್ಯ,ಊಟ, ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ವೈದ್ಯರು,ನರ್ಸ್, ಸರ್ಕಾರಕ್ಕೆ ಧನ್ಯವಾದ ತಿಳಿಸಿ ಪತ್ರ ಬರೆದಿದ್ದಾರೆ.ಜನರು ಕರೊನಾ ಯೋಧರನ್ನು ಈ ರೀತಿ ಬೆನ್ನು ತಟ್ಟಿದರೆ ಅವರ ಉತ್ಸಾಹ ಇಮ್ಮಡಿಯಾಗುತ್ತದೆ ಎಂದು ಸುಧಾಕರ್ ಮನವಿ ಮಾಡಿದ್ದಾರೆ.