ದೊಡ್ಡಬಳ್ಳಾಪುರ : ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ನರೇಗಾ ಯೋಜನೆ ಅಡಿಯಲ್ಲಿ ಗೋಕಟ್ಟೆ ಕಾಮಗಾರಿ, ಬದು ನಿರ್ಮಾಣ ಕಾಮಗಾರಿ, ಕೃಷಿಹೊಂಡ ಕಾಮಗಾರಿ,ಚರಂಡಿ ಕಾಮಗಾರಿ, ಗಿಡ ನೆಡುವ ಕಾಮಗಾರಿ, ನಮ್ಮ ಹೊಲ ನಮ್ಮ ದಾರಿ, ದನಗಳ ಕುಡಿಯುವ ನೀರಿನ ತೊಟ್ಟಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಂತ್ರಿಕ ಸಹಾಯಕ ಶಾಮಸುಂದರ್,ಕಾರ್ಯದರ್ಶಿ ನಾಚಾರಮ್,ಮ ಕರವಸೂಲಿಗಾರ ನವೀನ್ ಕುಮಾರ್ ಹಾಜರಿದ್ದರು.