ಬೆಂಗಳೂರು: ರಾಜ್ಯದ ಅನೇಕ ಕಡೆ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ಸಿಎಂ ಯಡಿಯೂರಪ್ಪ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು,ಮಳೆಯಿಂದಾಗುವ ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮುಖ್ಯ ಕಾರ್ಯದರ್ಶಿಯಯವರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಮಳೆ ಬಗ್ಗೆ ಕ್ಷಣಕ್ಷಣದ ಮಾಹಿತಿ ತೆಗೆದುಕೊಳ್ಳುವುದು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿರಲು ಸೂಚನೆ ನೀಡಿದ್ದಾರೆ.