ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಮಕ್ಕಳ ನ್ಯಾಯ ಕಾಯ್ದೆ 2015ರ ಸೆಕ್ಷನ್ 44ರ ಪೋಷಕತ್ವ ಯೋಜನೆಯಡಿಯಲ್ಲಿ ಮಕ್ಕಳನ್ನು ದತ್ತು ತೆಗೆದುಕೊಳ್ಳಬಯಸುವ ಕುಟುಂಬಗಳು, ಪಾಲಕರು ಹಾಗೂ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಗುವಿನ ರಕ್ಷಣೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಜೈವಿಕ ಕುಟುಂಬವಲ್ಲದ ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವರಿಗೆ 1 ವರ್ಷಕ್ಕೆ ಮೀರದ ಅವಧಿಯವರೆಗೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹದಾಗಿದೆ.
ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಅಧೀನದಲ್ಲಿ ಬರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ 18 ವರ್ಷದೊಳಗಿನ ಮಕ್ಕಳಿಗಾಗಿ ಬಾಲನ್ಯಾಯ ಕಾಯ್ದೆಯಡಿ ಪೋಷಣೆ ಮತ್ತು ರಕ್ಷಣೆ ಕುರಿತು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಛೇರಿಯ ಮಾರ್ಗದರ್ಶನದಂತೆ ಮಕ್ಕಳನ್ನು ದತ್ತುಗೆ ಪ್ರೋತ್ಸಾಹಿಸಲು ಅರ್ಜಿ ಕರೆಯಲಾಗಿದ್ದು, ಸೂಕ್ತ ಮಕ್ಕಳನ್ನು ಪೋಷಕತ್ವ ಯೋಜನೆಯಡಿ ದತ್ತು ತೆಗೆದುಕೊಳ್ಳಬಯಸುವ ಕುಟುಂಬಗಳು, ಪಾಲಕರು ಹಾಗೂ ಮಕ್ಕಳ ಕುರಿತಾದ ಅವರ ಆಯ್ಕೆಯ ಮಾಹಿತಿಯ ಅರ್ಜಿಯನ್ನು ಅವಶ್ಯಕತೆ ಇರುವ ಪಾಲಕರು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ, ಎರಡನೇ ಮಹಡಿ, ಕೊಠಡಿ ಸಂಖ್ಯೆ:206, ವಿಶ್ವನಾಥಪುರ ಪೊಲೀಸ್ ಠಾಣೆ ಎದುರು, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ಕಛೇರಿ ದೂ.ಸಂ.: 080-29560034, 8095951304 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.