ಮೈಸೂರು: ನಂಜನಗೂಡು ಟಿಹೆಚ್ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯಾಧಿಕಾರಿಗಳು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ಮನವೊಲಿಕೆ ಹಿನ್ನೆಲೆ ವೈದ್ಯರ ಸಂಘ ಮುಷ್ಕರ ಹಿಂಪಡೆದಿದೆ.
ಈ ಕುರಿತು ವೈಧ್ಯಕೀಯ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟ್ ಮೂಲಕ ಪ್ರತಿಭಟನೆ ಹಿಂಪಡೆದ ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರತಿಭಟನಾಕಾರರ ಷರತ್ತು
ಆರೋಗ್ಯ ಇಲಾಖೆ ಅಧಿಕಾರಿಗಳೇ ನಮಗೆ ನೋಡಲ್ ಅಧಿಕಾರಿಗಳಾಗಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳು ಕರೊನಾ ನೊಡಲ್ ಆಫಿಸರ್ ಆಗುವುದು ಬೇಡ. ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನ ನೇಮಕ ಮಾಡಿಕೊಳ್ಳಬೇಕು ಎಂಬ ಷರತ್ತುಗಳನ್ನು ಸರ್ಕಾರದ ಮುಂದೆ ಇರಿಸಿದ್ದಾರೆ. ಪ್ರಕರಣ ವರದಿ ಬರೋವರೆಗು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ವೈದ್ಯರ ಸಂಘ ನಿರ್ಧರಿಸಿದೆ.