ಬೆಂಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಸುಗ್ಗಿ ಹಬ್ಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ.2ರಂದು ಸಂಜೆ 5 ಗಂಟೆಗೆ ಹೊಸಕೋಟೆ ತಾಲ್ಲೂಕಿನ ಹಸಿಗಾಳದಲ್ಲಿ ಏರ್ಪಡಿಸಲಾಗಿದೆ.
ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹಾಗೂ ಪೌರಾಡಳಿತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಖಾತೆ ಸಚಿವ ಎನ್.ನಾಗರಾಜ್(ಎಂ.ಟಿ.ಬಿ) ಅವರ ಘನ ಉಪಸ್ಥಿತಿಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್., ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಕೆ.ಕೃಷ್ಣಮೂರ್ತಿ ಪೂಜೇನ ಅಗ್ರಹಾರ, ಬಾಲೇಪುರ ಜಿ.ಲಕ್ಷ್ಮೀನಾರಾಯಣ, ಕೆ.ಸಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಎಂ.ಮಂಜುನಾಥ್(ವೈ.ಎಸ್.ಎಂ), ಸಿ.ನಾಗರಾಜ್, ಜಯಕುಮಾರಿ ಸೊಣ್ಣಪ್ಪ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ವಿ.ಸಿ.ಜಯದೇವಯ್ಯ(ಜಯಣ್ಣ), ಉಪಧ್ಯಕ್ಷರಾದ ನಾಗವೇಣಿ ಶ್ರೀನಿವಾಸ್, ಸದಸ್ಯರುಗಳಾದ ಹೆಚ್.ಎಸ್.ಮಂಜುನಾಥ, ತಾಜ್ ಉನ್ನೀಸಾ ಶಫೀಉಲ್ಲಾ ಅವರು ಭಾಗವಹಿಸಲಿದ್ದಾರೆ.
ಹಸಿಗಾಳ ಗ್ರಾಮ ಪಂಚಾಯಿತಿ ಗೌರವಾನ್ವಿತ ಸದಸ್ಯರುಗಳಾದ ಹರ್ಷಿಣಿ.ಎಂ., ಮಂಜುಳ, ಪದ್ಮಾವತಿ ಕೆ.ಸಿ ಚಿನ್ನಪ್ಪ, ಕೆ.ಹೆಚ್.ದೇವರಾಜ್, ವಿನಯ್ ಮುನಿರಾಜಣ್ಣ, ಕಲಾವತಿ, ಪದ್ಮಾವತಿ ಮಂಜುನಾಥ್. ಎಂ., ನಾರಾಯಣಸ್ವಾಮಿ, ಆನಂದ್, ಸುರೇಶ್.ಎ, ಮುನಿಯಮ್ಮ, ಭೈರೇಗೌಡ, ಎಸ್.ವಿ.ಮುನಿನಂಜೇಗೌಡ, ಭಾರತಿ, ಲಲಿತಾ ನಾರಾಯಣಸ್ವಾಮಿ, ರಾಧಾಕೃಷ್ಣ ಅಂಗಡಿ, ಲಕ್ಷ್ಮಣ್.ಎಚ್.ಎಂ., ಪಾರ್ವತಮ್ಮ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಭಾಗವಹಿಸಲಿದ್ದಾರೆ.
ಮೆರವಣಿಗೆ: ಕಾರ್ಯಕ್ರಮದಲ್ಲಿ ಮಧ್ಯಾಹ್ನ 2 ಗಂಟೆಗೆ ಮೆರವಣಿಗೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಅವರು ಉದ್ಘಾಟಿಸಲಿದ್ದು, ಹೊಸಕೋಟೆ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರಾದ ಬಿ.ಎನ್.ಗೋಪಾಲಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಪುರಸ್ಕøತರು, ಸೂಲಿಬೆಲೆಯ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ ದೊಡ್ಡ ಹರಳಗೆರೆ ಗ್ರಾಮ ಪಂಚಾಯತಿ ಸದಸ್ಯರಾದ ಬಿ.ವಿ.ಸತೀಶ್ ಗೌಡರು ಹಾಗೂ ಮಾಜಿ ಭೂಸಕ್ರಮಣ ಸಮಿತಿ ಸದಸ್ಯರಾದ ಮುನಿಶಾಮಣ್ಣ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.