ಬೆಂ.ಗ್ರಾ.ಜಿಲ್ಲೆ: ಪಶ್ಚಿಮ ಬಂಗಾಳದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವಂತೆ, ಹಿಂದು ಜಾಗರಣಾ ವೇದಿಕೆ ಜಿಲ್ಲಾ ಘಟಕದವತಿಯಿಂದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಹಿಂದು ಜಾಗರಣಾ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿ ಮುನೀಂದ್ರ, ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಫಲಿತಾಂಶ ಬಂದ ನಂತರದ ದಿನಗಳಿಂದ, ಹಿಂದೂಗಳ ಮೆಲೆ ನೆಡೆದ ಮುಸಲ್ಮಾನರ ಅಟ್ಟಹಾಸ ಮತ್ತು ದಂಗೆಯ ವಿರುದ್ದ ಕ್ರಮ ಕೈಗೊಳ್ಳದ ಮಮತ ಬ್ಯಾನರ್ಜಿ ಹಾಗು ದಂಗೆ ಮಾಡಿ ಹಿಂದೂಗಳನ್ನು ಹೆದರಿಸಿ, ಮಹಿಳೆಯರ ಮೇಲಿನ ಅತ್ಯಾಚಾರ ಮಾಡಿದ ಸ್ಥಳೀಯ ಹಾಗು ಬಾಂಗ್ಲಾ ಮುಸ್ಲಿಂ ಹಾಗು ರೊಹಿಂಗ್ಯ ಮುಸಲ್ಮಾನರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಅಧ್ಯಕ್ಷ ನಂದಾರಾಮ್ ಸಿಂಗ್, ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಗೌಡ ಹಾಗೂ ಖಾಸ್ ಬಾಗ್ ಸುರೇಶ್ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….